ಬಾಕಿ ಕೇಳಿದರೆ ಕೇಂದ್ರದಿಂದ ಕಿರುಕುಳ: ಮಮತಾ ಬ್ಯಾನರ್ಜಿ ಗಂಬೀರ ಆರೋಪ

ಕೋಲ್ಕತ್ತಾ,ಜ.16-ಪಶ್ಚಿಮ ಬಂಗಾಳದಲ್ಲಿ ಕೇಂದ್ರ ಸರ್ಕಾರದ ಬೆಂಬಲವಿಲ್ಲದೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ ಅನುಷ್ಟಾನ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದಿಲ್ಲಿ ಹೇಳಿದ್ದಾರೆ.6,000 ಕೋಟಿ ನೀಡಬೇಕಿದೆ, ಬಾಕಿ ಕೇಳಿದರೆ ರಾಜ್ಯ ಸರ್ಕಾರಕ್ಕೆ ಕಿರುಕುಳ ನೀಡಲು ಕೇಂದ್ರ ತಂಡಗಳನ್ನು ಬಂಗಾಳಕ್ಕೆ ಕಳುಹಿಸುತ್ತಿದೆ ಎಂದು ಗಂಬೀರ ಆರೋಪ ಮಾಡಿದ್ದಾರೆ.ಗ್ರಾಮೀಣ ಉದ್ಯೋಗ ಖಾತ್ರಿಯೋಜನೆಯಡಿ ಅನುಷ್ಠಾನದಲ್ಲಿ ರಾಜ್ಯ ಸರ್ಕಾರ ಮುಂದೆ ಇದ್ದರೂ ಅನುದಾನ ಬಿಡುಗಡೆ ಮಾಡುತ್ತಿಲ್ಲ ಹೀಗಾಗಿ ರಾಜ್ಯ ಸರ್ಕಾರವೇ ತನ್ನ ಅನುದಾನದಲ್ಲಿ ಯೋಜನೆ ನಿರ್ವಹಣೆ ಮಾಡುತ್ತಿದೆ ಎಂದು ತಿಳಿಸಿದ್ದಾರೆ.”ಕೇಂದ್ರ ಸರ್ಕಾರ ಪಶ್ಚಿಮ ಬಂಗಾಳಕ್ಕೆ ಎಂಜಿಎನ್‌ಆರ್‌ಇಜಿಎ ಹಣವನ್ನು ಬಿಡುಗಡೆ ಮಾಡುತ್ತಿಲ್ಲ. ಅದು ನಮಗೆ 6,000 ಕೋಟಿ ಬಾಕಿ ಇದೆ. ಆದರೆ ಬಿಜೆಪಿ ಆಡಳಿತದ ರಾಜ್ಯಗಳು 100 ದಿನಗಳ ಕೆಲಸದ ಯೋಜನೆಗೆ ಹಣ ಪಡೆಯುತ್ತಿವೆ” ಎಂದು ಅವರು ಆರೋಪ ಮಾಡಿದ್ದಾರೆ.ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್ ಅವರು ಸಂದರ್ಶನವೊಂದರಲ್ಲಿ 2024 ರಲ್ಲಿ ಪ್ರಧಾನಿ ಹುದ್ದೆಗೆ ಹೋರಾಡುವ ಸಾಮರ್ಥ್ಯವನ್ನು ಮಮತಾ ಬ್ಯಾನರ್ಜಿ ಹೊಂದಿದ್ದಾರೆ ಎಂದು ಹೇಳಿದ ಕೆಲವು ದಿನಗಳ ನಂತರ ಅವರ ಕಾಮೆಂಟ್‌ಗಳು ಬಂದಿವೆ.

ಪ್ರಧಾನಿ ಹುದ್ದೆ ಖಾಲಿ ಇಲ್ಲ:

ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆಯ ನಡುವೆ ಕೆಲವರು ತಾವೇ ಪ್ರಧಾನಿ ಅಭ್ಯರ್ಥಿ ಎಂದು ಬಿಂಬಿಸಿಕೊಳ್ಳುತ್ತಿದ್ದಾರೆ. ಪ್ರಧಾನಿ ಹುದ್ದೆಗೆ “ಖಾಲಿ ಇಲ್ಲ” ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.ಮುಂದಿನ ಲೋಕಸಭೆ ಚುನಾವಣೆಗೆ ಮುನ್ನ ಮಮತಾ ಬ್ಯಾನರ್ಜಿ ಅವರು ಇತರ ವಿರೋಧ ಪಕ್ಷದ ನಾಯಕರೊಂದಿಗೆ ಸಭೆ ನಡೆಸುತ್ತಿದ್ದಾರೆ. ಅವರು ಮೇಘಾಲಯದಲ್ಲಿ ತೃಣಮೂಲ ಕಾಂಗ್ರೆಸ್ ಹೆಜ್ಜೆಗುರುತನ್ನು ವಿಸ್ತರಿಸಲು ನೋಡೋಣ ಎಂದು ಸವಾಲು ಹಾಕಿದ್ದಾರೆ.