ಬಾಕಿ ವಿದ್ಯಾರ್ಥಿ ವೇತನವನ್ನು ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹಿಸಿ ಅ ಭಾ ವಿ ಪ ಪ್ರತಿಭಟನೆ

ಬೀದರ:ನ.೪:ಲಕ್ಷಾಂತರ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಪ್ರತಿ ವರ್ಷ ವಿದ್ಯಾರ್ಥಿ ವೇತನಕ್ಕೆ ತಮ್ಮ ಅರ್ಜಿಯನ್ನು ಸಲ್ಲಿಸಿ, ತಮ್ಮ ಶಿಕ್ಷಣಕ್ಕೆ ವಿದ್ಯಾರ್ಥಿ ವೇತನದಿಂದ ಬರುವ ಹಣವನ್ನು ಪೂರಕವಾಗಿ ಬಳಸಿಕೊಳ್ಳುತ್ತಿದ್ದರು. ಆದರೆ ಈ ಬಾರಿ ವಿದ್ಯಾರ್ಥಿ ವೇತನ ತಂತ್ರಾAಶದಲ್ಲಿ ಅರ್ಜಿಯನ್ನು ಸಲ್ಲಿಸಿದ ನಂತರ ಈ ತಂತ್ರಾAಶದಲ್ಲಿ ವಿದ್ಯಾರ್ಥಿ ವೇತನ ಬಿಡುಗಡೆ ಆಗಿರುವುದಾಗಿ ನಮೂದಿಸಲಾಗಿದೆ. ಆದರೆ ಬಹುತೇಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ದೊರೆತಿರುವುದಿಲ್ಲ. ಈ ಕೂಡಲೇ ಸರ್ಕಾರವು ಈ ವಿಷಯ ಕುರಿತು ಗಮನವನ್ನು ಹರಿಸಿ, ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನದ ಹಣವನ್ನು ಬಿಡುಗಡೆಗೊಳಿಸಬೇಕಾಗಿ ಹಾಗೂ ಈ ವಿದ್ಯಾರ್ಥಿ ವೇತನದಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತ ಬೀದರ ವತಿಯಿಂದ ನಗರದ ಅಂಬೇಡ್ಕರ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯ ವರೆಗೆ ಪ್ರತಿಭಟನೆ ಮಾಡುವುದರ ಮಾನ್ಯ ಜಿಲ್ಲಾಧಿಕಾರಿಗಳ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳು ಕರ್ನಾಟಕ ಸರ್ಕಾರ ಬೆಂಗಳೂರು ರವರಿಗೆ ಮನವಿ ಸಲ್ಲಿಸಲಾಯಿತು.

ಈ ಪ್ರತಿಭಟನೆಯಲ್ಲಿ ನಗರ ಕಾರ್ಯದರ್ಶಿ ಅಂಬ್ರೇಶ ಬಿರಾದಾರ, ನಗರ ಸಂಘಟನಾ ಕಾರ್ಯದರ್ಶಿ ಹೇಮಂತ, ಕಾರ್ಯಕರ್ತರಾದ ಶಶಿಕಾಂತ ಪವನ ರಾಜಗೀರಾ, ಮಾರುತಿ, ನಿಖಿಲ, ಶಿವಾನಂದ, ವಿದ್ಯಾರ್ಥಿನಿಯರಾದ ಅಪೇಕ್ಷಾ, ಲಾವಣ್ಯ, ಶಿವಾನಿ, ಪ್ರಜ್ಞಾ, ವೈಶಾಲಿ, ಕಲ್ಪನಾ, ಸ್ವಾತಿ ಇನ್ನೀತರರು ಈ ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದರು