ಬಾಕಿ ವೇತನ ಪಾವತಿಗೆ ಒತ್ತಾಯಿಸಿ ಪ್ರತಿಭಟನೆ

ರಾಯಚೂರು,ನ.13- ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಪದವಿ ಪೂರ್ವ ಕಾಲೇಜು, ಮಾದರಿ ವಸತಿ ಶಾಲೆ, ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ರಾತ್ರಿ ಕಾವಲುಗಾರರು, ಅಡುಗೆ-ಸಹಾಯಕರು, ಅಡುಗೆ ಗಾರರಿಗೆ ಡಿ-ಗ್ರೂಪ್ ಮತ್ತು ಶುಶ್ರೂಕಿಯರಿಗೆ ಬಾಕಿ ವೇತನ ಪಾವತಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
‌ಕಳೆದ ಎಂಟು ತಿಂಗಳಿನಿಂದ ಸಿಬ್ಬಂದಿಗೆ ವೇತನ ಪಾವತಿಸಿಲ್ಲ. ಜೀವನ‌ ನಿರ್ವಹಣೆ ಕಷ್ಟಕರವಾಗಿದೆ. ಮನೆಯಲ್ಲಿ ಮಕ್ಕಳು, ಹಿರಿಯರು ಉಪವಾಸ‌ವಿರುವ ಪರಿಸ್ಥಿತಿ ನಿರ್ಮಾಣವಾಗಿದೆ. ಕ್ವಾರಂಟೈನ್ ಕೇಂದ್ರಗಳಾಗಿ ಉಪಯೋಗಿಸುತ್ತಿರುವ ಶಾಲಾ ಕಟ್ಟಡಗಳಲ್ಲಿ ಸಹ ಕಾರ್ಯನಿರ್ವಹಿಸಿದ್ದು, ವೇತನ ಪಾವತಿಸಲು 2ಕೋಟಿ 92 ಲಕ್ಷ ರೂ.ಗಳನ್ನು ಕಲ್ಯಾಣ ಕರ್ನಾಟಕ ಭಾಗದ ಆರು ಜಿಲ್ಲೆಗಳ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳಿಗೆ ನೀಡಲಾಗಿದ್ದು, ಅನಗತ್ಯವಾಗಿ ವೇತನ ಪಾವತಿ ಮಾಡಲು ವಿಳಂಬ ಮಾಡುತ್ತಿದ್ದಾರೆ. ಈ ಕುರಿತು ಜಿಲ್ಲಾಧಿಕಾರಿಗಳ ಕೂಡಲೇ ಕ್ರಮಕೈಗೊಂಡು ವೇತನ ಪಾವತಿಸಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ರಂಗನಾಥ, ಅಂಬಿಕಾ, ರುಹೀನಾ, ರೇಣುಕಾ, ಅನ್ನಪೂರ್ಣ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.