ಬಾದಾಲ್ ನಿಧನ ೨ ದಿನ ಶೋಕಾಚಾರಣೆ

ನವದೆಹಲಿ,ಏ.೨೬-ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಹಾಗೂ ಶಿರೋಮಣಿ ಅಕಾಲಿದಳದ ನಾಯಕ ಪ್ರಕಾಶ್ ಸಿಂಗ್ ಬಾದಲ್ ನಿಧನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ದೇಶಾದ್ಯಂತ ೨ ದಿನ ಶೋಕಾಚಾರಣೆ ಘೋಷಿಸಿದೆ.
ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ೯೫ ವರ್ಷದ ಬಾದಲ್ ಅವರನ್ನು ಕಳೆದ ವಾರ ಆಸ್ಪತ್ರೆಗೆ ದಾಖಲು ಮಾಡಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ನಿನ್ನೆ ರಾತ್ರಿ ಅವರು ನಿಧನರಾಗಿದ್ದಾರೆ.
ಬಾದಲ್ ಅವರು ೫ ಬಾರಿ ಪಂಜಾಬ್ ಮುಖ್ಯಮಂತ್ರಿಯಾಗಿ ಕೆಲಸ ನಿರ್ವಹಿಸಿದ್ದರು. ೪೩ನೇ ವಯಸ್ಸಿನಲ್ಲೇ ಮುಖ್ಯಮಂತ್ರಿ ಹುದ್ದೆಯನ್ನು ಅಲಂಕರಿಸಿದ್ದರು.
ಬಾದಾಲ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದೌಪ್ರದಿ ಮುರ್ಮು ಸೇರಿದಂತೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಮೋದಿಯವರು ಚಂಡೀಗಡಕ್ಕೆ ತೆರಳಿ ಅಗಲಿದ ನಾಯಕನ ಅಂತಿಮ ದರ್ಶನ ಪಡೆದರು.