ಬಾಬಾಸಾಹೇಬರೆಡೆಗೆ ಖರ್ಗೆಜೀ ಜೀವನ ಕಥನ ಕೃತಿ ಸೆ. 28ರಂದು ಲೋಕಾರ್ಪಣೆ

ಕಲಬುರಗಿ:ಸೆ.25: ನಗರದ ಡಾ. ಎಸ್.ಎಂ. ಪಂಡಿತ್ ರಂಗಮಂದಿರದಲ್ಲಿ ಸೆಪ್ಟೆಂಬರ್ 28ರಂದು ಮಂಗಳವಾರ ಬೆಳಿಗ್ಗೆ 10-30ಕ್ಕೆ ಗುಲಬರ್ಗಾ ವಿಶ್ವವಿದ್ಯಾಲಯದ ಕಲಾ ನಿಕಾಯದ ಡೀನ್ ಹಾಗೂ ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕ ಪ್ರೊ. ಎಚ್.ಟಿ. ಪೋತೆ ಅವರ ಬಾಬಾಸಾಹೇಬ್‍ರೆಡೆಗೆ ಖರ್ಗೆ ಜೀವನ ಕಥನ ಪರಿಷ್ಕøತ ಮುದ್ರಣದ ಕೃತಿ ಲೋಕಾರ್ಪಣೆಗೊಳ್ಳಲಿದೆ ಎಂದು ಕುಟುಂಬ ಪ್ರಕಾಶನ ಸದಸ್ಯ ಡಾ. ರಮೇಶ್ ಟಿ. ಪೋತೆ ಹಾಗೂ ದೃಶ್ಯ ಬೆಳಕು ಸಾಂಸ್ಕøತಿಕ ಸಂಸ್ಥೆಯ ಅಧ್ಯಕ್ಷ ಡಾ. ಪರಶುರಾಮ್ ಪಿ., ಅವರು ಇಲ್ಲಿ ಹೇಳಿದರು.
ಶನಿವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೈದ್ರಾಬಾದ್ ಕರ್ನಾಟಕ ಎಂದು ಕರೆಯಿಸಿಕೊಳ್ಳುತ್ತಿರುವ ಪ್ರದೇಶ ಈಗ ಕಲ್ಯಾಣ ಕರ್ನಾಟಕ ಎಂದು ಬದಲಾಗಿದೆ. ಕಲ್ಯಾಣ ಕರ್ನಾಟಕ ಎಂದು ಕರೆಯಿಸಿಕೊಳ್ಳುವಷ್ಟರ ಮಟ್ಟಿಗೆ ಈ ಭಾಗದಲ್ಲಿ ಬದಲಾವಣೆ ತಂದವರು, ಅಭಿವೃದ್ಧಿ ಮಾಡಿದವರು ಹಿರಿಯ ಮತ್ತು ಮುತ್ಸದ್ದಿ ರಾಜಕಾರಣಿ, ರಾಷ್ಟ್ರ ಮಟ್ಟದ ನಾಯಕ ಮಲ್ಲಿಕಾರ್ಜುನ್ ಖರ್ಗೆಜೀಯವರು ಜನಪರ ಕಾಳಜಿ ಹೊಂದಿದ ನಿಜವಾದ ಜನನಾಯಕ ಎಂದರು.
ಸತತ ಐದು ದಶಕಗಳ ಕಾಲ ಸಕ್ರಿಯ ರಾಜಕಾರಣದಲ್ಲಿ ಅನೇಕ ಖಾತೆ ಗಳನ್ನು ನಿಭಾಯಿಸಿ ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ತಮ್ಮ ಕಾರ್ಯದ ಮೂಲಕ ಗುರುತಿಸಿ ಕೊಂಡಿದ್ದಾರೆ. ಇಂತಹ ಒಬ್ಬ ಧೀಮಂತ ನಾಯಕನನ್ನು ಕುರಿತು ಕಥನ ಪರಿಸ್ಕøತ ಮುದ್ರಣದ ಕೃತಿ ಲೋಕಾರ್ಪಣೆಗೊಳ್ಳುತ್ತಿದೆ ಎಂದು ಅವರು ಹೇಳಿದರು.
ಪ್ರತಿಷ್ಠಿತ ನೃಪತುಂಗ ಸಾಹಿತ್ಯ ಪ್ರಶಸ್ತಿ ಪುರಸ್ಕøತರು ಹಾಗೂ ಕರ್ನಾಟಕ ಸಂಸ್ಕøತ ವಿಶ್ವವಿದ್ಯಾಲಯದ ಮಾಜಿ ಕುಲಪತಿ ಪೆÇ್ರ. ಮಲ್ಲೇಪುರಂ ಜಿ. ವೆಂಕಟೇಶ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ, ಖ್ಯಾತ ಲೇಖಕರು ಮತ್ತು ಕೇಂದ್ರ ಸಾಹಿತ್ಯ ಅಕ್ಯಾಡೆಮಿ, ನವದೆಹಲಿಯ ನಿವೃತ್ತ ಕಾರ್ಯದರ್ಶಿ ಅಗ್ರಹಾರ್ ಕೃಷ್ಣಮೂರ್ತಿ ಅವರು ಕಾರ್ಯಕ್ರಮದ ಉದ್ಘಾಟನೆ ಮತ್ತು ಗ್ರಂಥ ಲೋಕಾರ್ಪಣೆ ಮಾಡುವರು. ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪೆÇ್ರ. ದಯಾನಂದ್ ಅಗಸರ್ ಅವರು ಮುಖ್ಯ ಅತಿಥಿಯಾಗಿ ಆಗಮಿಸುವರು. ಕೃತಿಯ ಕುರಿತು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪೆÇ್ರ. ವಿಕ್ರಮ್ ವಿಸಾಜಿ ಮತ್ತು ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಪೆÇ್ರ. ಮುದೇನೂರ್ ನಿಂಗಪ್ಪ ಅವರು ಮಾತನಾಡುವರು. ಕೃತಿಯ ಲೇಖಕ ಪ್ರೊ. ಎಚ್.ಟಿ. ಪೋತೆ ಮುಂತಾದವರು ಉಪಸ್ಥಿತರಿರುವರು ಎಂದು ಅವರು ತಿಳಿಸಿದರು. ಡಾ. ಶ್ರೀಶೈಲ್ ನಾಗರಾಳ್ ಮುಂತಾದವರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.