ಬಾಬಾ ರಾಮದೇವ್ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿ : ಪ್ರಧಾನಿಗೆ ಪತ್ರ

ನವದೆಹಲಿ, ಮೇ. 26- ಅಲೋಪತಿ ವೈದ್ಯಕೀಯ ಪದ್ಧತಿಯಿಂದ ಕೊರೊನಾ ಸೋಂಕು ಕಡಿಮೆಯಾಗುವುದಿಲ್ಲ ಎಂದು ಹೇಳಿಕೆ ನೀಡಿರುವ ಯೋಗಗುರು ಬಾಬಾ ರಾಮದೇವ್ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿ ಎಂದು ಭಾರತೀಯ ವೈದ್ಯಕೀಯ ಸಂಘ- ಐಎಂಎ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದೆ.

ಬಾಬಾ ರಾಮದೇವ್ ಅವರ ಹೇಳಿಕೆಗೆ ಭಾರತೀಯ ವೈದ್ಯಕೀಯ ಸಂಘ ತೀವ್ರ ಖಂಡನೆ ವ್ಯಕ್ತಪಡಿಸುತ್ತಿದ್ದಂತೆ ಕೇಂದ್ರ ಆರೋಗ್ಯ ಸಚಿವ‌ ಡಾಹರ್ಷವರ್ಧನ್ ಅವರು ಬಾಬಾರಾಮದೇವ್ ಅವರಿಗೆ ಪತ್ರ ಬರೆದು ತಮ್ಮ ಹೇಳಿಕೆಯನ್ನು ವಾಪಾಸ್ ಪಡೆಯುವಂತೆ ಆಗ್ರಹಿಸಿದ್ದರು. ಇದಾದ ಮರು ದಿನವೇ ತಮ್ಮ ಹೇಳಿಕೆ ಹಿಂಪಡೆದಿದ್ದರು.

ಇಷ್ಟಕ್ಕೆ ಸುಮ್ಮನಾಗದ ಭಾರತೀಯ ವೈದ್ಯಕೀಯ ಸಂಘ, ಇನ್ನು ಒಂದು ಹೆಜ್ಜೆ ಮುಂದೆ ಹೋಗಿ ರಾಮದೇವ್ ಹೇಳಿಕೆ ವೈದ್ಯ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ. ಅವರ ಹೇಳಿಕೆ ದೇಶದ್ರೋಹದ ಹೇಳಿಕೆಯಾಗಿದೆ. ಹೀಗಾಗಿ ಅವರ ವಿರುದ್ಧ ಪ್ರಕರಣ ದಾಖಲಸಿ ಪ್ರಧಾನಿಗೆ ಬರೆದಿರುವ ಪತ್ರದಲ್ಲಿ ಒತ್ತಾಯಿಸಿದೆ.

ಐಎಂಎ ಅಧ್ಯಕ್ಷ ಡಾ. ಜೆ.ಎ ಜಯಲಾಲ್‌ ಹಾಗು ಕಾರ್ಯದರ್ಶಿ ಡಾ.‌ಜಯೇಶ್ ಎಂ‌. ಲಿಲೆ ಅವರು‌ ಪ್ರಧಾನಿಗೆ ಬರೆದಿರುವ ಪತ್ರದಲ್ಲಿ ಬಾಬಾ ರಾಮದೇವ್ ಅವರು ಕೊರೊನಾ ಸೋಂಕಿನ ಲಸಿಕೆ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.

2 ಡೊಸ್ ಲಸಿಕೆ ಪಡೆದ 10 ಸಾವಿರ ವೈದ್ಯರು ಮತ್ತು ಲಕ್ಷಾಂತರ ಜನರು ಸಾವನ್ನಪ್ಪಿದ್ದಾರೆ ಎನ್ನುವ ರಾಮ್ ದೇವ್ ಅವರ ಹೇಳಿಕೆಯನ್ನು ಉಲ್ಲೇಖ ಮಾಡಿರುವ ಅವರು ಈ ರೀತಿಯ ತಪ್ಪು ಮಾಹಿತಿಯನ್ನು ದೇಶದ ಜನರಿಗೆ ನೀಡುವ ಕೆಲಸ ಮಾಡುತ್ತಿದ್ದಾರೆ ಹೀಗಾಗಿ ಅವರ ವಿರುದ್ಧ ದೇಶದ್ರೋಹದ ಅಡಿ ಪ್ರಕರಣ ದಾಖಲಿಸಿ ಎಂದು ಒತ್ತಾಯಿಸಿದ್ದಾರೆ.

ದೇಶ ಎದುರಿಸುತ್ತಿರುವ ಸಂಕಷ್ಟದ ಸಮಯದಲ್ಲಿ ದೇಶಾದ್ಯಂತ ವೈದ್ಯರು ,ವೈದ್ಯಕೀಯ ಸಿಬ್ಬಂದಿ ಜನರ ಜೀವ ರಕ್ಷಣೆ ಮಾಡಲು ಹಗಲಿರುಳು ಶ್ರಮಿಸುತ್ತಿದ್ದಾರೆ ಇಂತಹ ಸಮಯದಲ್ಲಿ ಬಾಬಾರಾಮದೇವ್ ಹೇಳಿಕೆ ವೈದ್ಯ ಸಮುದಾಯದ ಬಲ ಕುಗ್ಗಿಸುವಂತಹುದು ಎಂದು ಹೇಳಿದ್ದಾರೆ.

ಬಾಬಾ ರಾಮದೇವ್ ವಿರುದ್ಧ ದೇಶದ್ರೋಹದ ವಿರುದ್ಧ ಪ್ರಕರಣ ದಾಖಲಿಸಿ ಅವರ ಅವರ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ