
ಕಲಬುರಗಿ:ಎ.27: ಕಾಳಗಿ ತಾಲೂಕಿನ ಹೊಸ ಹೆಬ್ಬಾಳ ಗ್ರಾಮದಲ್ಲಿ ಡಾ.ಬಾಬು ಜಗಜೀವನ್ ರಾಮ್ ರವರ 116ನೇಯ ಜಯಂತಿಯನ್ನು ಬಹು ವಿಜೃಂಭಣೆಯಿಂದ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಬಹಿರಂಗ ಸಭೆಯನ್ನು ಕರ್ನಾಟಕ ರಾಜ್ಯ ಮಾದಿಗ ಸಮಾಜ ಸಂಘಟನೆಯ ಜಿಲ್ಲಾಧ್ಯಕ್ಷರಾದ ಸಿದ್ಧಲಿಂಗ ಸಿ ಕಟ್ಟಿಮನಿಯವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ದೇಶದ ಮಹಾ ಪುರುಷರ ಜಯಂತಿಯನ್ನು ಆಚರಣೆ ಮಾಡಿದರೆ ಸಾಲದು ಅವರ ತತ್ವ ಸಿದ್ದಾಂತಗಳನ್ನು ಅಳವಡಿಸಿಕೊಂಡು ಹೋಗುವುದರ ಜೊತೆಗೆ ಮಹಾ ಪುರುಷರು
ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ನಡೆಯಬೇಕು ಎಂದರು.ತಾವು ಮೊದಲು ಒಳ್ಳೆಯ ಶಿಕ್ಷಣ ಪಡೆಯಬೇಕು ತದನಂತರ ತಮಗೆ ಸರಕಾರದಿಂದ ಸಿಗಬೇಕಾದ ಸಾಲ ಸೌಲಭ್ಯ ಹಕ್ಕಿಗಾಗಿ ಹೋರಾಟ ಮಾಡುವುದರ ಮೂಲಕ ಸಮಾಜದಲ್ಲಿ ಒಳ್ಳೆಯ ವ್ಯಕ್ತಿಯಾಗಿ ಬೆಳೆಯಬೇಕು ಎಂದು ಅವರು ಯುವಕರಿಗೆ ಕಿವಿಮಾತು ಹೇಳಿದರು.ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಹೆಬ್ಬಾಳ ಗ್ರಾಮದ ಯುವ ಮುಖಂಡರಾದ ಪವನ ಪಿ ಪಾಟೀಲ ಕಾರ್ಯಕ್ರಮ ಕುರಿತು ಮಾತನಾಡಿದರು. ಹೆಬ್ಬಾಳ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಾಗರಾಜ ದಿವಟಗಿ ಅವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಲಾಲಪ್ಪ ಸಿಂಗಿ, ರಾಜು ಮಾಡಬೋಳ ,ಗ್ರಾಮ ಪಂಚಾಯತ್ ಸದಸ್ಯರು ಮತ್ತು ಗ್ರಾಮದ ಹಿರಿಯ ಮುಖಂಡರು ಸೇರಿದಂತೆ ವೇದಿಕೆಯ ಮೇಲೆ ಇತರರು ಇದ್ದರು.ಈ ಸಂದರ್ಭದಲ್ಲಿ ಸಂಬಣ್ಣ ಮಾಂಗ್, ಶ್ರೀಶೈಲ, ಮಲ್ಲಿಕಾರ್ಜುನ ರುಮ್ಮನಗೂಡ್, ಸೇರಿದಂತೆ ಮಾದಿಗ ಸಮಾಜದ ಹಿರಿಯ, ಮುಖಂಡರು ಹಾಗೂ ಸಮಾಜದ ಮಹಿಳೆಯರು ಉಪಸ್ಥಿತರಿದ್ದರು.