ಬಾಬು ಸಾಧನೆ ಎಲ್ಲರಿಗೂ ಸ್ಪೂರ್ತಿ: ಸಿದ್ದು

ಬೆಂಗಳೂರು,ಏ.೫-ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನ್ ರಾಮ್ ಅವರ ಬದುಕು ಮತ್ತು ಸಾಧನೆ ನಮ್ಮೆಲ್ಲರಿಗೂ ಸದಾ ಮಾರ್ಗದರ್ಶನ ಮಾಡುತ್ತಿರಲಿ ಎಂದು ವಿಧಾನಸಭೆಯ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ

ಆಧುನಿಕ ಭಾರತದ ನಿರ್ಮಾಣ ಮತ್ತು ಮುನ್ನಡೆಯಲ್ಲಿ ನಿರ್ಣಾಯಕ ಪಾತ್ರವಹಿಸಿದ್ದ, ಬಾಬು ಜಗಜೀವನ್ ರಾಮ್ ಅವರು ದೇಶದಲ್ಲಿ ಹಸಿರು ಕ್ರಾಂತಿ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದರು

ಕೆಪಿಸಿಸಿ ಕಛೇರಿಯಲ್ಲಿ ಹಮ್ಮಿಕೊಂಡಿದ್ದ ಬಾಬು ಜಗಜೀವನ್ ರಾವ್ ಅವರ ೧೧೪ನೇ ಜನ್ಮದಿನದಂದು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಈ ವಿಷಯ ತಿಳಿಸಿದ್ದಾರೆ.

ಬಾಬುಜಿಯವರ ಅವರ ಜನ್ಮದಿನದಂದು ಗೌರವ ಮತ್ತು ಕೃತಜ್ಞತೆಯಿಂದ ಸ್ಮರಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಿ ದಿವಂಗತ ಬಾಬು ಜಗಜೀವನರಾಮ್ ಅವರ ಜನ್ಮ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ, ಬಾಬು ಜಗಜೀವನರಾಮ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದೆ ಎಂದು ಹೇಳಿದ್ದಾರೆ.

ಈ ಸಂದರ್ಭ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್ ಇತರರು ಇದ್ದರು.