ಬಾಯಿ ಆರೋಗ್ಯವಾಗಿದ್ದರೆ ದೇಹ ಆರೋಗ್ಯವಾಗಿರುತ್ತದೆ


ಸಂಜೆವಾಣಿ ವಾರ್ತೆ
ಚಿತ್ರದುರ್ಗ.ಮಾ.೨೧;ಬಾಯಿ ಆರೋಗ್ಯವಾಗಿದ್ದರೆ ದೇಹ ಆರೋಗ್ಯವಾಗಿರುತ್ತದೆ ಎಂದು ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ.ಅಭಿನವ್ ಅಭಿಪ್ರಾಯಪಟ್ಟರು.ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳವರ ಸಭಾಂಗಣದಲ್ಲಿ ವಿಶ್ವ ಬಾಯಿ ಆರೋಗ್ಯ ದಿನಾಚರಣೆ ಪ್ರಯುಕ್ತ ಜರುಗಿದ ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಈ ಬಾರಿಯ ವಿಶ್ವ ಬಾಯಿಯ ಆರೋಗ್ಯ ದಿನದ ಥೀಮ್ ” ಎ ಹ್ಯಾಪಿ ಮೌತ್ ಇಸ್… ಎ ಹ್ಯಾಪಿ ಬಾಡಿ ” ಆಗಿದೆ. ಈ ವಿಷಯವು ಬಾಯಿಯ ಆರೋಗ್ಯದ ಮಹತ್ವ ಮತ್ತು ಸಾಮಾನ್ಯ ಯೋಗಕ್ಷೇಮಕ್ಕೆ ಹೇಗೆ ಸಂಬಂಧಿಸಿದೆ ಎಂಬುದರ ಕುರಿತು ಸಾರ್ವಜನಿಕ ಜಾಗೃತಿಯನ್ನು ಹೆಚ್ಚಿಸುವುದು. ಇದು ಜನರಿಗೆ ಉತ್ತಮ ಮೌಖಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಅಗತ್ಯವಿರುವ ಮಾಹಿತಿ, ಸಂಪನ್ಮೂಲಗಳು ಮತ್ತು ಸ್ವಯಂ-ಭರವಸೆಯನ್ನು ಒದಗಿಸುವುದನ್ನು ಒತ್ತಿಹೇಳುತ್ತದೆ. ಈ ಥೀಮ್ ಜನರ ಜೀವನ, ಆರ್ಥಿಕತೆ ಮತ್ತು ಆರೋಗ್ಯ ವ್ಯವಸ್ಥೆಗಳ ಮೇಲೆ ಪರಿಣಾಮ ಬೀರುವ ಬಾಯಿಯ ಕಾಯಿಲೆಗಳ ಹೊರೆಯನ್ನು ಕಡಿಮೆ ಮಾಡುವ ಗುರಿ ಹೊಂದಿದೆ ಎಂದರು.ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ಮಾತನಾಡಿ, ಯುವ ಜನತೆ ಹೆಚ್ಚು ಹೆಚ್ಚು ತಂಬಾಕು, ಗುಟ್ಕಾ, ಧೂಮಪಾನ ಮಾಡುವ ಅಭ್ಯಾಸಗಳಿಗೆ ಬಲಿಯಾಗುತ್ತಿದ್ದಾರೆ. ಬಾಯಿ ಆರೋಗ್ಯಕ್ಕೆ ಸಂಬಂಧಿಸಿದ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ರಾಷ್ಟ್ರೀಯ ಬಾಯಿ ಆರೋಗ್ಯ ಕಾರ್ಯಕ್ರಮ ಯುವಕರಿಗೆ ಜಾಗೃತಿ ಮೂಡಿಸುವಲ್ಲಿ ಒಳ್ಳೆಯ ಕಾರ್ಯಕ್ರಮವಾಗಿದೆ ಎಂದರು.