ಬಾರ್ ಮಾಲೀಕ ಮನೀಶ್ ಶೆಟ್ಟಿ ಕೊಲೆಗಾರರಿಗೆ ಗುಂಡಿಕ್ಕಿ ಸೆರೆ

ಬೆಂಗಳೂರು,ಅ.17-ಬ್ರಿಗೇಡ್ ರಸ್ತೆಯ ಡುಯೆಟ್ ಬಾರ್ ಮಾಲೀಕ ಮನೀಶ್ ಶೆಟ್ಟಿ ಅವರಿಗೆ ಗುಂಡಿಕ್ಕಿ ಕೊಲೆ ಗೈದು ಪರಾರಿಯಾಗಿದ್ದ ನಾಲ್ವರು ಆರೋಪಿಗಳನ್ನು ಕೇಂದ್ರ ವಿಭಾಗದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ಅಲಿಯಾಸ್ ಮುನ್ನಾ (45), ಗಣೇಶ್ (39), ನಿತ್ಯ (29) ಮತ್ತು ಅಕ್ಷಯ್ (32 ಎಂದು ಗುರುತಿಸಲಾಗಿದೆ. ಬಂಧಿಸಲು ಹೋದಾಗ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಇಬ್ಬರು ಆರೋಪಿಗಳಿಗೆ ಅತ್ಮರಕ್ಷಣೆಗಾಗಿ ಗುಂಡು ಹೊಡೆಯಲಾಗಿದೆ‌ ಎಂದು ಡಿಸಿಪಿ ಅನುಚೇತ್ ತಿಳಿಸಿದ್ದಾರೆ.
ಮನೀಶ್ ಶೆಟ್ಟಿಯನ್ನು ಹತ್ಯೆಗೈಯಲು ಉಪಯೋಗಿಸಿದ್ದ ಮಾರಕಾಸ್ತ್ರಗಳನ್ನ ಜಫ್ತಿ ಮಾಡಲು ಹೊಸೂರು ರಸ್ತೆಯ ಬಾರ್ಲೆನ್ ಸ್ಮಶಾನ ಬಳಿ ಪೊಲೀಸರು ತಪಾಸಣೆ ಮಾಡುವಾಗ ಆರೋಪಿಗಳು ಹಲ್ಲೆಗೆ ಯತ್ನಿಸಿದ್ದಾರೆ. ಆಗ ಪೊಲೀಸರು ಗುಂಡು ಹೊಡೆದಿದ್ದಾರೆ.
ಆರೋಪಿ ಶಶಿಕಿರಣ್ ಹಾಗೂ ಆರೋಪಿ ಅಕ್ಷಯ್ ಕಾಲಿಗೆ ಗುಂಡು ತಗುಲಿದೆ. ಗಾಯಗೊಂಡ ಅವರಿಬ್ಬರನ್ನು ಸೇಂಟ್ ಫಿಲೋಮಿನಾ ಆಸ್ಪತ್ರೆಗೆ ದಾಖಲಿಸಲಾಗಿದೆ ಬಂಧಿತರಲ್ಲಿ ಶಶಿಕಿರಣ್ ಮತ್ತು ನಿತ್ಯ ಕೊಡಗಿನವರಾದರೆ, ಗಣೇಶ್ ಮತ್ತು ಅಕ್ಷಯ್ ಮಂಗಳೂರಿನವರಾಗಿದ್ದಾರೆ. ಡ್ಯೂಯಟ್ ಬಾರ್ ಮಾಲೀಕ ಮನೀಶ್ ಶೆಟ್ಟಿಯನ್ನು ಅ.15ರಂದು ರಾತ್ರಿ ‌ಬೈಕ್ ನಲ್ಲಿ ಬಂದಿದ್ದ ದುಷ್ಕರ್ಮಿಗಳು
ಬಾರ್ ಮುಂದೆ ನಿಂತಿದ್ದಾಗ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿ ಕೊಲೆ ಮಾಡಿ ಪರಾರಿಯಾಗಿದ್ದರು.


ಮನೀಶ್ ಶೆಟ್ಟಿ ಕೊಲೆಗೈದ ,ಬೈಕ್ ಸವಾರ ಆರೋಪಿ ಗಣೇಶ