ಬಾಲಕಾರ್ಮಿಕತೆಯಿಂದ ಬಿಡುಗಡೆ ಹೊಂದಿದ ಮಕ್ಕಳಿಗೆ ಆಹಾರ ಧಾನ್ಯ, ಶೈಕ್ಷಣಿಕ ಸಾಮಾಗ್ರಿ ವಿತರಣೆ

ರಾಯಚೂರು,ಜು.೨೭- ಮಕ್ಕಳು ವಿದ್ಯಾಭ್ಯಾಸದ ಸಮಯದಲ್ಲಿ ಕೆಲಸಕ್ಕೆ ಹೋಗದೆ ಸರಿಯಾದ ರೀತಿಯಲ್ಲಿ ಶಿಕ್ಷಣವನ್ನು ಪಡೆಯುವುದರ ಮೂಲಕ ಸದೃಢ ರಾಷ್ಟ್ರನಿರ್ಮಾಣ ಮಾಡಬೇಕೆಂದು ಹಾಗೂ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಆರತಿ ಅವರು ಹೇಳಿದರು.
ಅವರು ಜು.೨೭ರ(ಗುರುವಾರ) ದಂದು ನಗರದ ಕಾರ್ಮಿಕ ಇಲಾಖೆಯ ಕಚೇರಿಯಲ್ಲಿ ೨೦೨೩-೨೪ನೇ ಸಾಲಿನಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕಯಿಂದ ಬಿಡುಗಡೆಗೊಂಡು ಶಿಕ್ಷಣದ ಮುಖ್ಯವಾಹಿನಿಗೆ ಸೇರಿರುವ ಎಸ್.ಸಿ ಮತ್ತು ಎಸ್.ಟಿ ಮಕ್ಕಳಿಗೆ ಜು.೨೭ ರಂದು ಎಸ್.ಸಿ.ಪಿ ಮತ್ತು ಟಿ.ಎಸ್.ಪಿ ಉಪಯೋಜನೆಯಡಿ ಆಹಾರ ಧಾನ್ಯ, ಸಮವಸ್ತ್ರ ಮತ್ತು ಶೈಕ್ಷಣಿಕ ಸಾಮಗ್ರಿಗಳನ್ನು ವಿತರಿಸಿ ಮಾತನಾಡಿದರು.
ಮಕ್ಕಳು ವಿದ್ಯಾಭ್ಯಾಸ ಮಾಡಬೇಕು ಇನ್ನು ಮುಂದೆ ಯಾವುದೇ ಕಾರಣಕ್ಕೂ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕತೆಯಲ್ಲಿ ತೊಡಗಬಾರದು ಎಂದು ಮಕ್ಕಳಿಗೆ ಮತ್ತು ಪಾಲಕರಿಗೆ ತಿಳುವಳಿಕೆ ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಮಂಜುನಾಥರೆಡ್ಡಿ, ಕಾರ್ಮಿಕ ನಿರೀಕ್ಷಕ ಎನ್.ವೆಂಕಟಸ್ವಾಮಿ ಸೇರಿದಂತೆ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.