ಬಾಲಕಾರ್ಮಿಕರ ನೇಮಕ ಕ್ರಮದ ಎಚ್ಚರಿಕೆ

‘ವಿಶ್ವ ಬಾಲಕಾರ್ಮಿಕ ವಿರೋಧಿ ದಿನ’ ಪ್ರಯುಕ್ತ ನಗರದ ಎಂ.ಜಿ. ರಸ್ತೆಯಲ್ಲಿ ಇಂದು ನಡೆದ ಜಾಥಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರತಿಜ್ಞಾವಿಧಿ ಬೋಧಿಸಿದರು. ಸಚಿವ ಸಂತೋಷ್ ಲಾಡ್, ಕಾರ್ಮಿಕ ಇಲಾಖೆ ಆಯುಕ್ತ ಅಕ್ರಂ ಪಾಷ, ಸರ್ಕಾರದ ಕಾರ್ಯದರ್ಶಿ ಡಾ. ಎನ್.ಎ. ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.

ಬೆಂಗಳೂರು,ಜೂ.೧೨:ದುರುದ್ದೇಶದಿಂದ ಬಾಲಕಾರ್ಮಿಕರನ್ನು ನೇಮಿಸಿಕೊಳ್ಳುವವರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬಾಲ ಕಾರ್ಮಿಕ ವಿರೋಧಿ ದಿನಾಚರಣೆ ಪ್ರಯುಕ್ತ ನಗರದ ಎಂಜಿ ರಸ್ತೆಯ ಗಾಂಧಿ ಪ್ರತಿಮೆ ಬಳಿ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿದರು.
ಬಾಲ ಕಾರ್ಮಿಕರ ನೇಮಕಾತಿ ಶಿಕ್ಷಾರ್ಹ ಅಪರಾಧ ಎಂದು ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ವಿಚಾರದಲ್ಲಿ ಸಾರ್ವಜನಿಕರು, ಪೋಷಕರು ಉದ್ದಿಮೆದಾರರಿಗೆ ಜಾಗೃತಿ ಮೂಡಿಸುವುದು ಅಗತ್ಯ ಎಂದಿದ್ದಾರೆ.ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೋಷಕರು ಮಾತ್ರವಲ್ಲ, ಉದ್ಯಮ ನಡೆಸುವರು ಈ ಬಗ್ಗೆ ಜಾಗೃತಿ ವಹಿಸಬೇಕು. ಈ ನಿಟ್ಟಿನಲ್ಲಿ ಪ್ರಮಾಣವಚನ ಬೋಧನೆ ಮಾಡಲಾಗಿದೆ ಎಂದರು.ಮಕ್ಕಳು ಕಲಿಯುವ ವಯಸ್ಸಿನಲ್ಲಿ ದುಡಿಮೆ ಮಾಡಿದರೆ ವಿದ್ಯಾಭ್ಯಾಸದಿಂದ ವಂಚಿತರಾಗಬೇಕಿದೆ. ಎಲ್ಲರೂ ವಿದ್ಯೆ ಕಲಿಯಬೇಕು. ಇದು ಮೂಲಭೂತ ಹಕ್ಕು ಎಂದು ಸಂವಿಧಾನ ಹೇಳುತ್ತದೆ ಎಂದು ತಿಳಿಸಿದರು.೧೮ ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳಬಾರದು, ಒಂದು ವೇಳೆ ಕೆಲಸಕ್ಕೆ ನೇಮಿಸಿಕೊಂಡರೆ ಅದು ಕಾನೂನಿಗೆ ವಿರುದ್ಧ ಅಂತಹವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಬಹುದು.