ಬಾಲಕಾರ್ಮಿಕರ ಬಗ್ಗೆ ಜಾಗೃತಿ ಮೂಡಿಸಿದ ಜಿಲ್ಲಾಧಿಕಾರಿ

ಕೊಪ್ಪಳ ಏ 02 : ಕಾರ್ಮಿಕ ಪದ್ಧತಿ ನಿರ್ಮೂಲನೆಗಾಗಿ ಎಲ್ಲಾ ರೀತಿಯ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಲ್ಕರ್ ಅವರು ಅಧಿಕಾರಿಗಳಿಗೆ ಸೂಚಿಸಿದರು ಅಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಬಾಲ ಕಾರ್ಮಿಕ ಯೋಜನಾಸಂಘದ ವತಿಯಿಂದ ನಡೆದ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಕ್ರಿಯೆ ಯೋಜನೆಯ ಅನುಷ್ಠಾನ ಪ್ರಗತಿ ಕುರಿತಂತೆ ಚರ್ಚಿಸಲು ಆಯೋಜಿಸಿದ್ದ ಜಿಲ್ಲಾ ಕಾರ್ಯ ಕಾರಣ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು ಕೊಪ್ಪಳ ಜಿಲ್ಲೆಯಲ್ಲಿ ಬಾಲಕಾರ್ಮಿಕ ಸಂಖ್ಯೆ ಪದ್ಧತಿ ನಿರ್ಮೂಲನೆಗಾಗಿ ಸಂಬಂಧಪಟ್ಟ ಅಧಿಕಾರಿಗಳು ನಗರ ಮತ್ತು ಗ್ರಾಮೀಣ ಭಾಗದ ಜನರಲ್ಲಿ ಜಾಗೃತಿ ಮತ್ತು ಕಾನೂನಿನ ಅರಿವು ಮೂಡಿಸಲು ಕಾರ್ಮಿಕರ ಗಳನ್ನು ರೂಪಿಸಬೇಕು ಎಂದು ತಿಳಿಸಿದರು