ಬಾಲಕಾರ್ಮಿಕರ ರಕ್ಷಣೆ


ಸಂಜೆವಾಣಿ ವಾರ್ತೆ
ಸಿರುಗುಪ್ಪ, ಫೆ.22: ಜಿಲ್ಲಾ ಬಾಲ ಕಾರ್ಮಿಕ ಯೋಜನಾ ನಿರ್ದೇಶಕ  ಎ.ಮೌನೇಶ್ ನೇತೃತ್ವದಲ್ಲಿ  ನಗರದ ಸಿಂಧನೂರು ರಸ್ತೆ ಹಾಗೂ ಬಳ್ಳಾರಿ ರಸ್ತೆಯಲ್ಲಿ  ಮಂಗಳವಾರ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳ ತಂಡ ಹೋಟೆಲ್, ಅಂಗಡಿ ಹಾಗೂ ವರ್ಕ ಶಾಪ್ ಗಳಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರು ಮಂದಿ ಬಾಲಕಾರ್ಮಿಕರನ್ನು ರಕ್ಷಿಸಿದರು.
ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಜಿಲ್ಲಾ ಕಾರ್ಮಿಕ ಇಲಾಖೆ, ತಾಲೂಕು ಆಡಳಿತ ಹಾಗೂ ನಗರಸಭೆ ಸಿಬ್ಬಂದಿ ಮಿಂಚಿನ ದಾಳಿ ನಡೆಸಿದರು.  ನಾಲ್ಕು ಮಕ್ಕಳನ್ನು ಕೆಲಸದಿಂದ ಬಿಡುಗಡೆಗೊಳಿಸಿ ಪುನರ್ವಸತಿ ಮತ್ತು ಮುಂದಿನ ಕ್ರಮಕ್ಕಾಗಿ ಮಕ್ಕಳ ಕಲ್ಯಾಣ ಸಮಿತಿಯ ವಶಕ್ಕೆ ನೀಡಲಾಗಿದೆ. ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತಹಸೀಲ್ದಾರ್ ಎನ್ ಆರ್ ಮಂಜುನಾಥ , ತಾಲ್ಲೂಕು ಕಾರ್ಮಿಕ ನಿರೀಕ್ಷಕ ರವಿದಾಸ್, ನಗರಸಭೆಯ ಅಧಿಕಾರಿ ವೆಂಕೋಬಪ್ಪ, ರಾಜಾಭಕ್ಷಿ, ಎನ್.ಜಿ.ಒ ವಿವೇಕಾನಂದ ವಿದ್ಯಾ ಸಂಸ್ಥೆಯ ಅಧ್ಯಕ್ಷ ಎಚ್. ಮೌಲಾಲಿ  ದಾಳಿಯಲ್ಲಿ ಭಾಗವಹಿಸಿದ್ದರು.