ಚಿಂತಾಮಣಿ,ಜೂ.೭- ಬಾಲ ಕಾರ್ಮಿಕ ನಿಷೇಧ ಮಾಸಾಚರಣೆ ಅಂಗವಾಗಿ ಬಾಲಕಾರ್ಮಿಕತೆ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ನಡೆಸಲಾಯಿತು. ಇದೇ ವೇಳೆ ಚೇಳೂರು ರಸ್ತೆಯ ಫೋರ್ ಸ್ಟ್ರೋಕ್ ಗ್ಯಾರೇಜ್‌ನಲ್ಲಿ ಕೆಲಸ ಮಾಡುತ್ತಿದ್ದ ಬಾಲಕಾರ್ಮಿಕರನ್ನು ಪತ್ತೆ ಹಚ್ಚಿ ಎಫ್‌ಐಆರ್ ದಾಖಲಿಸಲಾಗಿದೆ.
ಈ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ, ಕಾರ್ಮಿಕ ಅಧಿಕಾರಿ ವರಲಕ್ಷ್ಮೀ, ಚಿಂತಾಮಣಿ ಕಾರ್ಮಿಕ ನಿರೀಕ್ಷಕಿ, ಕಲಾವಾಣಿ, ಶಿಡ್ಲಘಟ್ಟ ಕಾರ್ಮಿಕ ನಿರೀಕ್ಷಕಿ ವಿಜಯಲಕ್ಷ್ಮಿ, ಚಿಕ್ಕಬಳ್ಳಾಪುರ ಬಾಲಕಾರ್ಮಿಕ ಯೋಜನಾ ನಿರ್ದೇಶಕ ರಮೇಶ ಮತ್ತು ಚಿಂತಾಮಣಿ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಮಕ್ಕಳ ಸಹಾಯವಾಣಿ ಚಿಂತಾಮಣಿ ಉಪಸ್ಥಿತರಿದ್ದರು.