
ಕಲಬುರಗಿ,ಮಾ 31: ಅಪ್ರಾಪ್ತ ಬಾಲಕಿಗೆ ಪ್ರೀತಿಸುತ್ತೇನೆ ಮದುವೆಯಾಗುತ್ತೇನೆ ಎಂದು ಬೆನ್ನು ಬಿದ್ದು ಚುಡಾಯಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಹೆಚ್ಚುವರಿ ಮತ್ತು ಸೆಷನ್ಸ್ ನ್ಯಾಯಾಲಯ ( ವಿಶೇಷ ಪೋಕ್ಸೋ)ದ ನ್ಯಾಯಾಧೀಶರು ಅಪರಾಧಿಗೆ 3 ವರ್ಷ ಜೈಲುಶಿಕ್ಷೆಮತ್ತು 2 ಸಾವಿರ ರೂ ದಂಡ ವಿಧಿಸಿ ಆದೇಶ ನೀಡಿದ್ದಾರೆ.
ಕಲಬುರಗಿ ತಾಲೂಕಿನ ಡೊಂಗರಗಾವದ ಸುರೇಶ ರಾಗಿ ಶಿಕ್ಷೆಗೆ ಒಳಗಾದ ವ್ಯಕ್ತಿ.ಬಾಲಕಿಯು ಶಾಲೆಗೆ ಹೋಗುತ್ತಿದ್ದಾಗ ನಿನ್ನನ್ನು ಪ್ರೀತಿಸುತ್ತೇನೆ ಮದುವೆಯಾಗುತ್ತೇನೆ ಎಂದು ಹೇಳಿ ಚುಡಾಯಿಸುತ್ತ ಮಾನಸಿಕ ಹಿಂಸೆ ನೀಡುತ್ತಿದ್ದನು.ಈ ಕುರಿತು ಕಮಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ವಿಶೇಷ ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶ ಯಮನಪ್ಪ ಬಮ್ಮಣಗಿ ಅವರು ,ಪ್ರಕರಣದ ವಿಚಾರಣೆ ನಡೆಸಿ ಆದೇಶ ನೀಡಿದ್ದಾರೆ.ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ಶಾಂತವೀರ ಬಿ ತುಪ್ಪದ ಅವರು ವಾದ ಮಂಡಿಸಿದ್ದರು.