ಬಾಲಕಿಯರ ಪದವಿ ಪೂರ್ವ ಕಾಲೇಜಿಗೆ ಕಾಂಪೌಡ್ ನಿರ್ಮಾಣ

ಸಂಜೆವಾಣಿ ವಾರ್ತೆ
ಚಿತ್ರದುರ್ಗ.ಆ.22: ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಅಗತ್ಯ ಇರುವ  ಮೂಲಭೂತ ಸೌಕರ್ಯ ಒದಗಿಸಲಾಗುವುದು. ಆದ್ಯತೆ ಮೇರೆಗೆ  ಕಾಲೇಜಿನ ಸುತ್ತ ಕಾಂಪೌಂಡ್ ಹಾಗೂ ಶೌಚಾಲಯ ನಿರ್ಮಿಸಲಾಗುವುದೆಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭರವಸೆ ನೀಡಿದರು.ಚಿತ್ರದುರ್ಗ ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ 2023-24ನೇ ಸಾಲಿನ ಸಾಂಸ್ಕøತಿಕ, ಕ್ರೀಡೆ, ರಾಷ್ಟ್ರೀಯ ಸೇವಾ ಯೋಜನಾ ಘಟಕ, ರೋವರ್ಸ್ ಮತ್ತು ರೇಂಜರ್ಸ್ ಹಾಗೂ ಇಕೋ ಕ್ಲಬ್‍ಗಳ ಉದ್ಘಾಟನೆ ನೆರವೇರಿಸಿದ ಅವರು, ನಂತರ ಜರುಗಿದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ವಿದ್ಯಾರ್ಥಿಗಳು ಯಶಸ್ಸನ್ನು ಮುಟ್ಟಲು ಗಮನವಿಟ್ಟು ಓದಬೇಕು. ಸ್ಪಷ್ಟವಾದ ಗುರಿಯನ್ನು ಹೊಂದಿ ಜ್ಞಾನರ್ಜನೆ ಮಾಡಬೇಕು. ಮನಸ್ಸುಗಳು ತಮ್ಮ ಹಿಡಿತದಲ್ಲಿ ಇಟ್ಟುಕೊಳ್ಳಬೇಕು. ವಿದ್ಯಾರ್ಥಿ ಜೀವನದಲ್ಲಿ ಸೇವಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು.ಮಕ್ಕಳ ಭವಿಷ್ಯದ ಬಗ್ಗೆ ತಂದೆ-ತಾಯಿಗಳು ತಮ್ಮ ಜೀವನವನ್ನೇ ಮುಡುಪಾಗಿಟ್ಟಿರುತ್ತಾರೆ.  ದೊಡ್ಡ ಕನಸುಗಳನ್ನು ಕಟ್ಟಿಕೊಂಡಿರುತ್ತಾರೆ. ಆ ಕನಸನ್ನು ನನಸು ಮಾಡುವ ಜವಾಬ್ದಾರಿ ನಿಮ್ಮದಾಗಿರುತ್ತದೆ. ನೀವು ಎಷ್ಟೇ ಎತ್ತರಕ್ಕೆ ಬೆಳೆದರು ನಿಮ್ಮ ತಂದೆ-ತಾಯಿಗಳನ್ನು ಹಾಗೂ ಸ್ನೇಹಿತರನ್ನ ಮರೆಯಬಾರದು. ಹೆತ್ತವರು ಋಣವನ್ನು ತೀರಿಸಬೇಕು ಎಂದರು.