ಬಾಲಕಿ ಅತ್ಯಾಚಾರಿಗೆ 20 ವರ್ಷ ಜೈಲು

ಕಲಬುರಗಿ.ಜೂ.3: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪ ಸಾಬೀತಾದ್ದರಿಂದ ಅಳಂದ ತಾಲೂಕಿನ ಗ್ರಾಮವೊಂದರ ಧರ್ಮರಾಜ ಎಂಬಾತನಿಗೆ ಅಪರ ಜಿಲ್ಲಾ ಮತ್ತು ಸತ್ರ ( ವಿಶೇಷ ಪೋಕ್ಸೋ) ನ್ಯಾಯಾಲಯ-
(ಎಫ್‍ಟಿಎಸ್‍ಸಿ 1) 20 ವರ್ಷ ಜೈಲು ಶಿಕ್ಷೆ ಮತ್ತು 20 ಸಾವಿರ ರೂ ದಂಡ ವಿಧಿಸಿದೆ.
2023 ರ ಮಾರ್ಚ 3 ರಂದು ಧರ್ಮರಾಜನು ಬಾಲಕಿಯನ್ನು ತನ್ನ ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿ, ಯಾರಿಗಾದರೂ ಹೇಳಿದರೆ ಜೀವ ತೆಗೆಯುವದಾಗಿ ಬೆದರಿಕೆ ಹಾಕಿದ್ದನು.ಈ ಕುರಿತು ಅಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ,ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಲಾಗಿತ್ತು.
ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ಮತ್ತು ಸತ್ರ ( ವಿಶೇಷ ಪೋಕ್ಸೋ) ನ್ಯಾಯಾಲಯ-(ಎಫ್‍ಟಿಎಸ್‍ಸಿ 1)ದ ನ್ಯಾಯಾಧೀಶ ಯಮನಪ್ಪ ಬಮ್ಮಣಗಿ ಅವರು ತೀರ್ಪು ನೀಡಿದ್ದಾರೆ.ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ಶಾಂತವೀರ ಬಿ.ತುಪ್ಪದ ಅವರು ವಾದ ಮಂಡಿಸಿದ್ದರು.