ಬಾಲಕಿ ಮೇಲೆ ಬೀದಿನಾಯಿಗಳ ದಾಳಿ

ಕಲಬುರಗಿ,ಡಿ 28: ಆರು ವರ್ಷದ ಬಾಲಕಿ ಮೇಲೆ ಬೀದಿ ನಾಯಿಗಳು ದಾಳಿ ಮಾಡಿದ ಘಟನೆ
ಕಲಬುರಗಿ ನಗರ ದರ್ಗಾ ಏರಿಯಾದ ಮಿಜ್ಜಾ ನಗರದಲ್ಲಿ ನಡೆದಿದೆ.ಸಫೂರಾ ಬೀದಿ ನಾಯಿಗಳ ದಾಳಿಯಿಂದ ಗಾಯಗೊಂಡವಳು.
ನಾಯಿಗಳ ದಾಳಿಯಿಂದ ಬಾಲಕಿ ತೀವ್ರವಾಗಿ ಗಾಯಗೊಂಡಿದ್ದು ಅವಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಬೀದಿ ನಾಯಿಗಳನ್ನು ನಿಯಂತ್ರಿಸದ ಕಲಬುರಗಿ ಮಹಾನಗರ ಪಾಲಿಕೆ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶವ್ಯಕ್ತಪಡಿಸಿದ್ದಾರೆ
ಕಲಬುರಗಿ ಮಹಾನಗರ ಪಾಲಿಕೆಯ ಕಳೆದ ಸಾಮಾನ್ಯ ಸಭೆಯಲ್ಲಿ ಬೀದಿ ನಾಯಿಗಳ ಹಾವಳಿ ಕುರಿತಆಕ್ರೋಶ ವ್ಯಕ್ತವಾಗಿತ್ತು.ಪಾಲಿಕೆ ಸಾಮಾನ್ಯ ಸಭೆಯಲ್ಲಿ ವಿಷಯ ಚರ್ಚೆಯಾದರೂ ಪಾಲಿಕೆ ಅಧಿಕಾರಿಗಳುಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತವಾಗಿದೆ.