ಬಾಲಗಂಗಾಧರ ಶ್ರೀ ಯುಗ ಪ್ರವರ್ತಕರು

ತುಮಕೂರು, ಜ. ೧೫- ಡಾ. ಬಾಲಗಂಗಾಧರ ನಾಥ ಸ್ವಾಮೀಜಿ ಅವರು ಯುಗ ಪ್ರವರ್ತಕರಾಗಿದ್ದರು ಎಂದು ಹಿರೇಮಠಾಧ್ಯಕ್ಷರಾದ ಡಾ. ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯಪಟ್ಟರು.
ನಗರದ ಶ್ರೀ ಶಿವಕುಮಾರ ಸ್ಚಾಮೀಜಿ ವೃತ್ತದಲ್ಲಿ ಆಯೋಜಿಸಿದ್ದ ಡಾ. ಬಾಲಗಂಗಾಧರ ನಾಥ ಸ್ವಾಮೀಜಿಯವರ ೯ ನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಶ್ರೀಗಳು ಭಾರತೀಯ ಸಂಸ್ಕೃತಿಯ ಪ್ರತಿನಿಧಿಯಾಗಿ ದೊಡ್ಡ ಪ್ರಮಾಣದ ಸೇವೆ ಸಲ್ಲಿಸಿದ್ದಾರೆ. ಭಾರತೀಯ ಸಂಸ್ಕೃತಿಯ ಬೆಳವಣಿಗೆಗೆ, ಅದರ ಉತ್ಕರ್ಷಕ್ಕೆ ಅವರು ನೀಡಿದ ಕೊಡುಗೆಯನ್ನು ಯಾರೂ ಸಹ ಮರೆಯಲು ಸಾಧವಿಲ್ಲ. ಸಂಸ್ಕೃತಿಯ ರಾಯಬಾರಿಯಾಗಿ, ಧಾರ್ಮಿಕತೆ ದ್ಯೋತಕವಾಗಿ ಸಮಾಜದಲ್ಲಿ ಉತ್ತಮ ಕಾರ್ಯಗಳನ್ನು ಮಾಡಿದ ಮಹಾಪುರುಷರಾಗಿದ್ದು ಇತರರಿಗೆ ಆದರ್ಶ ಪ್ರಾಯರಾಗಿದ್ದಾರೆ. ಅವರ ಸದ್ಗುಣಗಳನ್ನು ಎಲ್ಲರೂ ಅನುಸರಿಸಿ ಅವರ ಮಾರ್ಗದಲ್ಲಿ ನಡೆಯುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಮುಂದಾಗೋಣ ಎಂದರು.
ಈ ಸಂದರ್ಭದಲ್ಲಿ ಆರ್. ದೊಡ್ಡಲಿಂಗಪ್ಪ, ಶ್ರೀನಾಥ್, ನರಸೇಗೌಡ, ರವಿಕುಮಾರ್, ಗಿರೀಶ್ ಮತ್ತಿತರರು ಉಪಸ್ಥಿತರಿದ್ದರು.