ಬಾಲನಟಿ ಬರ್ಕ್ಲಿ ನಾಯಕಿ

ಬಾಲನಟಿ ಯಾಗಿ ಗುರುತಿಸಿಕೊಂಡಿದ್ದ ಸಿಮ್ರಾನ್ ನಾಟೇಕರ್ ಇದೀಗ ಕನ್ನಡದಲ್ಲಿ ನಾಯಕಿಯಾಗಿದ್ದಾರೆ ಅದುವೇ “ಬರ್ಕ್ಲಿ ” ಚಿತ್ರದ ಮೂಲಕ. ಮೂಲತಃ ಮುಂಬೈನವರಾದ ಸಿಮ್ರಾನ್ ಸಾಕಷ್ಟು ಜಾಹಿರಾತುಗಳಲ್ಲಿ ಅಭಿನಯಿಸಿದ್ದಾರೆ. ಇದೇ ಮೊದಲ ಬಾರಿಗೆ ಬರ್ಕ್ಲಿ ಚಿತ್ರದಲ್ಲಿ ನಾಯಕಿಯಾಗಿ ನಟಿಸುವ ಮೂಲಕ ಸಿನಿರಂಗ ಪ್ರವೇಶಿಸಿದ್ದಾರೆ.

ಆನೇಕಲ್ ಬಾಲರಾಜ್ ನಿರ್ಮಿಸುತ್ತಿರುವ ಬರ್ಕ್ಲಿ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಪೋಸ್ಟ್ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗಿದೆ. ಸದ್ಯದಲ್ಲೇ ಚಿತ್ರದ ಮೊದಲಪ್ರತಿ ಸಿದ್ದವಾಗಲಿದೆ.

ಕರಿಯ, ಗಣಪ, ಕರಿಯ ೨ ಅದ್ದೂರಿ ಚಿತ್ರಗಳನ್ನು ನಿರ್ಮಿಸಿರುವ ಆನೇಕಲ್ ಬಾಲರಾಜ್ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ಮತ್ತೊಂದು ಅದ್ದೂರಿ ಚಿತ್ರ ಬರ್ಕ್ಲಿ.

ಸಾಹಸ ಪ್ರಧಾನ ಹಾಗೂ ಉತ್ತಮ‌ ಮನೋರಂಜನೆಯ ಚಿತ್ರಕ್ಕೆ ಸುಮಂತ್ ಕ್ರಾಂತಿ ನಿರ್ದೇಶನ ಮಾಡಿದ್ದಾರೆ. ಸಂತೋಷ್ ಬಾಲರಾಜ್ ಚಿತ್ರದ ನಾಯಕರಾಗಿ ಅಭಿನಯಿಸಿದ್ದಾರೆ.

ಬಹುಭಾಷ ನಟ ಚರಣರಾಜ್, ನಟಿ ಶೃತಿ, ಬಲ ರಾಜವಾಡಿ , ಬುಲೆಟ್ ಪ್ರಕಾಶ್ ಮುಂತಾದವರ ತಾರಾಬಳಗ ಚಿತ್ರದಲ್ಲಿದೆ. ಬಹದ್ದೂರ್ ಚೇತನ್ ಕುಮಾರ್, ಅಭಿ ಕನಸಿನ ಕವನ‌ಈ ಚಿತ್ರದ ಹಾಡುಗಳನ್ನು ರಚಿಸಿದ್ದಾರೆ. ಹೆಸರಾಂತ ಸಂಗೀತ ನಿರ್ದೇಶಕ ಜ್ಯೂಡ ಸ್ಯಾಂಡಿ ಸಂಗೀತ ನೀಡಿದ್ದಾರೆ. ಕೃಷ್ಣಕುಮಾರ್, ಎನ್.ಎಂ.ಸೂರಿ ಛಾಯಾಗ್ರಹಣವಿದೆ.