ಬಾಲಮಂದಿರ ಮಕ್ಕಳ ಕ್ರೀಡಾಕೂಟಕ್ಕೆ ಚಾಲನೆ

ಚಿತ್ರದುರ್ಗ.ಏ.೨೯; ಚಿತ್ರದುರ್ಗ ನಗರದ ಓನಕೆ ಓಬವ್ವ ಕ್ರೀಡಾಂಗಣದಲ್ಲಿ  ಬಾಲಮಂದಿರ ಮಕ್ಕಳ ಕ್ರೀಡಾಕೂಟಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್.ದಿವಾಕರ ಚಾಲನೆ ನೀಡಿದರು.ರಾಜ್ಯ ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಂಯುಕ್ತಾಶ್ರಯದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಮಕ್ಕಳ ಪಾಲನ ಸಂಸ್ಥೆಯಲ್ಲಿರುವ ಮಕ್ಕಳಿಗೆ ಒಳಾಂಗಣ ಮತ್ತು ಹೊರಾಂಗಣ ಕ್ರೀಡೆಗಳನ್ನು ಚಿತ್ರದುರ್ಗದ ಸರ್ಕಾರಿ ಬಾಲಕಿಯರ ಮತ್ತು ಬಾಲಕರ ಬಾಲಮಂದಿರ ಸಂಸ್ಥೆಯ ಮಕ್ಕಳಿಗೆ ಕ್ರೀಡಾಕೂಟ ಆಯೋಜಿಸಲಾಗಿತ್ತು. ಒಳಾಂಗಣ ಮತ್ತು ಹೊರಾಂಗಣ ಕ್ರೀಡೆಗಳನ್ನು ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಸ್.ದಿವಾಕರ ಉದ್ಘಾಟಿಸಿದರು.ಕ್ರೀಡಾಕೂಟದಲ್ಲಿ ಒಳಾಂಗಣ ಮತ್ತು ಹೊರಾಂಗಣ ಆಟಗಳಾದ ಬ್ಯಾಡ್ಮಿಂಟನ್, ಖೋಖೋ, ಕಬ್ಬಡಿ, ಉದ್ದ ಜಿಗಿತ, 100ಮೀ ಓಟ, ರಿಲೇ, ವಾಲಿಬಾಲ್ ಮತ್ತು ಗುಂಡು ಎಸೆತ ಆಟಗಳನ್ನು ಆಡಿಸಲಾಯಿತು.