ಬಾಲಿವುಡ್‍ಗೆ ನಟ ಯಶ್ ‘ರಾಮಾಯಣ’ದಲ್ಲಿ ನಟನೆ ಜೊತೆಗೆ ನಿರ್ಮಾಪಕ

ಬಾಲಿವುಡ್ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾ ರಾಮಾಯಣ ಚಿತ್ರೀಕರಣ ಪ್ರಾರಂಭವಾಗಿದೆ. ಭಾರತೀಯ ಪುರಾಣದ ಕಥೆ ತೆರೆದಿಡುವ “ರಾಮಾಯಣ” ಚಿತ್ರಕ್ಕಾಗಿ ರಾಕಿಂಗ್ ಸ್ಟಾರ್ ಯಶ್ ಹಾಗೂ ನಮಿತ್ ಮಲ್ಹೋತ್ರಾ ಕೈ ಜೋಡಿಸಿದ್ದಾರೆ. ಈ ಚಿತ್ರಕ್ಕೆ ಯಶ್ ನಿರ್ಮಾಪಕ ಕೂಡ.

ರಾಮಾಯಣ ಸಿನಿಮಾವನ್ನು ಬಹಳ ಅದ್ಧೂರಿಯಾಗಿ ದೃಶ್ಯ ರೂಪಕ್ಕೆ ಇಳಿಸುವುದಕ್ಕೆ ದಂಗಲ್ ನಿರ್ದೇಶಕ ನಿತೀಶ್ ತಿವಾರಿ ಹೊರಟಿದ್ದಾರೆ. ಬಹು ಕೋಟಿ ಬಜೆಟ್ ಹಾಕಿ ಚಿತ್ರ ನಿರ್ಮಾಣ ಮಾಡಲಾಗುತ್ತಿದೆ. ಯಶ್ ಒಡೆತನದ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ ಹಾಗೂ ನಮಿತ್ ಮಲ್ಹೋತ್ರಾ ಸಾರಥ್ಯದ ಪ್ರೈಮ್ ಫೆÇೀಕಸ್ ಸ್ಟುಡಿಯೋ ರಾಮಾಯಣ ಸಿನಿಮಾವನ್ನು ಜಂಟಿಯಾಗಿ ನಿರ್ಮಿಸುತ್ತಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ನಮಿತ್ ಮಲ್ಹೋತ್ರಾ, ರಾಮಾಯಣ ಕಥೆಗೆ ನ್ಯಾಯ ಸಲ್ಲಿಸಲು ಸಿದ್ಧನಾಗಿದ್ದೇನೆ ಸಂಸ್ಕ್ರತಿಯನ್ನು ಜಗತ್ತಿಗೆ ಪರಿಚಯಿಸಲು ಉತ್ಸಕನಾಗಿದ್ದು, ಯಶ್ ಅವರಲ್ಲಿಯೂ ಇದನ್ನು ಕಂಡುಕೊಂಡಿದ್ದೇನೆ. ಅವರ ಪಯಣದಿಂದ ಸ್ಪೂರ್ತಿ ಪಡೆದಿದ್ದೇನೆ. ಯಶ್ ಅವರಲ್ಲಿರುವ ಯೋಜನೆಯನ್ನು ಅರಿತುಕೊಂಡಿದ್ದೇನೆ. ರಾಮಾಯಣ ದೃಶ್ಯಕಾವ್ಯವನ್ನು ತೆರೆಗೆ ತರುತ್ತಿದ್ದೇವೆ ಎಂದರು.

ಯಶ್ ಮಾತನಾಡಿ, ಭಾರತೀಯ ಸಿನಿಮಾವನ್ನು ಜಾಗತಿಕ ಮಟ್ಟದಲ್ಲಿ ಪ್ರರ್ದಶಿಸುವುದು ಬಹುದಿನಗಳ ಕನಸು. ಅದರ ಹುಡುಗಾಟದಲ್ಲಿ  ಅತ್ಯುತ್ತಮ ಸ್ಟುಡಿಯೋ ಕಂಡುಕೊಂಡಿದ್ದೇನೆ. ಅದರ ಹಿಂದಿನ ಪ್ರೇರಕ ಶಕ್ತಿ ಒಬ್ಬ ಭಾರತೀಯ. ಸಿನಿಮಾ ರಂಗದ ಬೇರೆ ವಿಷಯಗಳ ಬಗ್ಗೆ ಚರ್ಚೆ ನಡೆಸುವಾಗ ರಾಮಾಯಣ ವಿಷಯ ಬಂದಿತು. ಭಾರತೀಯ ಸಂಸ್ಕೃತಿಯನ್ನು ಜಗತ್ತಿಗೆ ಪ್ರಸ್ತುತಪಡಿಸುವ ಸಿನಿಮಾ ಇದಾಗಿದ್ದು, ಈ ಮಹಾಕಾವ್ಯ ಸಿನಿಮಾ ರೂಪ ತಾಳುತ್ತಿದೆ. ಆ ಅತ್ಯುತ್ತಮ ಅನುಭವನ್ನು ಜಗತ್ತಿಗೆ ನೀಡಲು  ಕಾತರರಾಗಿದ್ದೇವೆ ಎಂದರು.

ಯಶ್ ತಮ್ಮದೇ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ ಎಂಬ ನಿರ್ಮಾಣ ಸಂಸ್ಥೆ ಹೊಂದಿದ್ದಾರೆ. ಈ ಬ್ಯಾನರ್ ನಡಿ ‘ಟಾಕ್ಸಿಕ್’ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ.  ಕೆವಿಎನ್ ಪೆÇ್ರಡಕ್ಷನ್ಸ್ ಜೊತೆಗೆ ‘ಮಾನ್ಸ್ಟರ್ ಮೈಂಡ್’ ಕ್ರಿಯೇಷನ್ಸ್ ಕೂಡ ‘ಟಾಕ್ಸಿಕ್’ ಸಿನಿಮಾದ ನಿರ್ಮಾಣದಲ್ಲಿ ಪಾಲುದಾರಿಕೆ ಹೊಂದಿದೆ. ಇದೇ ಬ್ಯಾನರ್ ನಡಿ ‘ರಾಮಾಯಣ’ ಸಿನಿಮಾಗೂ  ಯಶ್ ಬಂಡವಾಳ ಹೂಡುತ್ತಿದ್ದಾರೆ.