ಬಾಲ್ಯವಿವಾಹ ನಡೆದರೆ ದೂರು ದಾಖಲಿಸಿ- ಜಿಲ್ಲಾಧಿಕಾರಿ


ಧಾರವಾಡ,ಜೂ.1:ಜಿಲ್ಲೆಯಲ್ಲಿ ಬಾಲ್ಯ ವಿವಾಹ ನಡೆದರೆ ಎಫ್‍ಐಆರ್ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು.
ಅವರು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಭವನದಲ್ಲಿ ಮಹಿಳಾ ಮತ್ತು ಮಕ್ಕಳ ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಜಿಲ್ಲಾ ಮಟ್ಟದ ತ್ರೈಮಾಸಿಕ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.
ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯ ಅಡಿಯಲ್ಲಿ ನ್ಯಾಯಾಲಯಕ್ಕೆ ಹೋಗುವ ಪ್ರಕರಣಗಳನ್ನು ಆದಷ್ಟು ಬೇಗ ಇತ್ಯರ್ಥಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸುವಂತೆ ಸೂಚಿಸಿದರು. ಸ್ವಾಧಾರ ಗೃಹ ಯೋಜನೆ, ಉಜ್ವಲ್, ಪೆÇೀಶನ್ ಅಭಿಯಾನ್ ಹಾಗೂ ರಾಜ್ಯ ಮಹಿಳಾ ನಿಲಯ ಯೋಜನೆಗಳ ಕುರಿತು ಮಾಹಿತಿಯನ್ನು ಪಡೆದು ಅಧಿಕಾರಿಗಳೊಂದಿಗೆ ಚರ್ಚಿಸಿದ್ದರು.
ಕಲಘಟಗಿಯಲ್ಲಿರುವ ಬಾಲಕಿಯರ ವಸತಿ ನಿಲಯದಲ್ಲಿ ತೀರ ಕಡಿಮೆ ವಿದ್ಯಾರ್ಥಿಗಳಿರುವ ಕಾರಣ ಸ್ಥಗಿತಗೊಳಿಸಿ ವಿದ್ಯಾರ್ಥಿಗಳನ್ನು ಸರಕಾರಿ ವಸತಿ ನಿಲಯಕ್ಕೆ ವರ್ಗಾಯಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಬಾಲ್ಯ ವಿವಾಹಗಳು ಕುರಿತು ಜನರಲ್ಲಿ ಜಾಗೃತಿಯನ್ನು ಮೂಡಿಸಬೇಕು ಮತ್ತು ಬಾಲ್ಯ ವಿವಾಹ ನಡೆದ ಬಾಲಕಿಯ ಮನೆಗೆ ವಾರದಲ್ಲಿ ಒಮ್ಮೆಯಾದರೂ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಯ ಇಲಾಖೆಯ ಉಪ ನಿರ್ದೇಶಕಿ ಡಾ. ಎಚ್.ಎಚ್. ಕುಕನೂರ ಅವರು ಮಾತನಾಡಿ, ಜಿಲ್ಲೆಯಲ್ಲಿ ನಡೆದ ಬಾಲ್ಯ ವಿವಾಹದ ಕುರಿತು ಸಂಪೂರ್ಣ ವಿವರವನ್ನು ಸುರಕ್ಷಿಣಿ ವೆಬ್‍ಪೆÇೀರ್ಟ್‍ಲ್‍ನಲ್ಲಿ ಅಳವಡಿಸಿಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.

ಸಖಿ ಒನ್ ಸ್ಟಾಪ್ ಕೇಂದ್ರದಲ್ಲಿ ಜನೆವರಿಯಿಂದ ಇಲ್ಲಿಯವರೆಗೆ ಲೈಂಗಿಕ ಕಿರುಕುಳ, ಅತ್ಯಾಚಾರ, ಕೌಟುಂಬಿಕ ಕಲಹ ಸೇರಿದಂತೆ ಒಟ್ಟು 64 ಪ್ರಕರಣಗಳು ದಾಖಲಾಗಿವೆ ಎಂದು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು.
ಜಿಲ್ಲಾ ಪಂಚಾಯಿತಿಯ ಯೋಜನಾ ನಿರ್ದೇಶಕ ಬಸವಲಿಂಗ ಮೂಗನೂರಮಠ, ಸಹಾಯಕ ಪೆÇಲೀಸ್ ಆಯುಕ್ತ ಉಲ್ಲಣ್ಣನವರು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.