ಬಾಲ್ಯಾವಸ್ಥೆ ಮತ್ತು ಕಿಶೋರ ಕಾರ್ಮಿಕ ಮಕ್ಕಳ ದುಡಿಮೆ ನಿಯಂತ್ರಿಸಲು ಕಾನೂನು ಜಾರಿ:ಹಿರಿಯ ಸಿವಿಲ್ ನ್ಯಾಯಾಧೀಶ ಶ್ರೀನಿವಾಸ ನವಲೆ

ಕಲಬುರಗಿ:ಜೂ.01: ಬಾಲ್ಯಾವಸ್ಥೆ ಮತ್ತು ಕಿಶೋರ ಕಾರ್ಮಿಕ ಮಕ್ಕಳ ದುಡಿಮೆಯನ್ನು ನಿಯಂತ್ರಿಸಲು ಹಾಗೂ ನಿಷೇಧಿಸಲು ಬಾಲ್ಯಾವಸ್ಥೆ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ತಿದ್ದುಪಡಿ 2016 ರನ್ನು ಜಾರಿಗೆ ತರಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹಿರಿಯ ಸಿವಿಲ್ ನ್ಯಾಯಾಧೀಶರ ಶ್ರೀನಿವಾಸ ನವಲೆ ಹೇಳಿದರು.
ಶನಿವಾರ ನೂತನವಿದ್ಯಾಲಯ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಕಾರ್ಮಿಕ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಕಲಬುರಗಿ ಇವರುಗಳ ಸಂಯುಕ್ತಾಶ್ರಯದಲ್ಲಿ ” ” PAN-INDIA Rescue And Rehabilitation Campaign” ” ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ತಿದ್ದುಪಡಿ 2016″ ರ ಕುರಿತು ” ಕಾನೂನು ಅರಿವು ಜಾಥಾಕ್ಕೆ ಹಸಿರು ನಿಶಾನೆ ತೋರಿಸುವುದರ ಮೂಲಕ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.
ಎಲ್ಲಾ ಉದ್ಯೋಗಗಳಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸ ದುಡಿಸಿಕೊಳ್ಳುವುದು ಕಾನೂನು ಅಪರಾಧವಾಗಿದೆ ಹಾಗೂ 14 ರಿಂದ 18ರ ವಯಸ್ಸಿನ ಕಿಶೋರ ಕಾರ್ಮಿಕ ಮಕ್ಕಳನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನಿಯೋಜಿಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದರು.

ಉಪಕಾರ್ಮಿಕ ಆಯುಕ್ತರಾದ ವೆಂಕಟೇಶ ಎ ಶಿಂಧಿಹಟ್ಟಿ ಮಾತನಾಡಿ, " " PAN-INDIA Rescue And Rehabilitation Campaign"ಉದ್ದೇಶವೆನೆಂದರೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ನವದೆಹಲಿ ಮತ್ತು   ಕರ್ನಾಟಕ ಹೈಕೋರ್ಟ ನಿರ್ದೇಶನದ ಮೇರೆಗೆ ರಾಜ್ಯ ಮತ್ತು ಜಿಲ್ಲೆಗಳಲ್ಲಿ ಕೆಲಸದಲ್ಲಿ ತೊಡಗಿರುವ ಬಾಲ ಮತ್ತು ಕಿಶೋರ ಕಾರ್ಮಿಕರನ್ನು ರಕ್ಷಿಸಿ, ಪುನರವಸತಿಗೊಳಿಸಿ ಶಿಕ್ಷಣ ಮುಂದುವರಿಕೆಗೆ ಅವಕಾಶ ಮಾಡಿಕೊಡುವ ಉದ್ದೇಶದಿಂದ ಜೂನ್ 1 ರಿಂದ ಜೂನ್ 30 ರವರೆಗೆ  ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ ಎಂದರು.
ಒಂದು ತಿಂಗಳು ಪೂರ್ತಿ ನಡೆಯುವಂತಹ ಅಭಿಯಾನವಾಗಿದೆ ಬಾಲಕಾರ್ಮಿಕರ ಸಲುವಾಗಿ 11 ಇಲಾಖೆಯವರು ಈ ಒಂದು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ ಎಂದರು.
ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು, ಗ್ಯಾರೇಜು, ಧಾಬಾ, ಹೋಟೆಲ್, ಕಾರ್ಖಾನೆ ಮತ್ತು ಮೈನ್ಸ್ ಇಟ್ಟಿಗೆ ಭಟ್ಟಿ ಮತ್ತು ಕಟ್ಟಡ ನಿರ್ಮಾಣ; ನಡೆಯುತ್ತಿರುವ ಸ್ಥಳಗಳಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದರು.
  ಸ್ಟಿಕ್ಕರ್ ಮತ್ತು ಪೋಸ್ಟರ್‍ಗಳಲ್ಲಿ 18 ವರ್ಷದ ಒಳಗಿನ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಳ್ಳಬಾರದು ಎಂದು ಜಾಥದಲ್ಲಿ ಪ್ರದರ್ಶಿಸಲಾಯಿತು.
  ಸಹಾಯಕ ಕಾರ್ಮಿಕ ಆಯುಕ್ತರು ಹಾಗೂ ಸದಸ್ಯ ಕಾರ್ಯದರ್ಶಿಗಳು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಡಾ. ಅವಿನಾಶ ನಾಯ್ಕ ಅವರು ಅಧ್ಯಕ್ಷತೆ ವಹಿಸಿದ್ದರು.
ಜಾಥಾ ಕಾರ್ಯಕ್ರಮದಲ್ಲಿ ಕಾರ್ಮಿಕ ಆಯುಕ್ತರಾದ ಡಾ. ಅವಿನಾಶ ನಾಯ್ಕ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲಕರಾದ ಶಿವಶರಣಪ್ಪ ಮೂಳೆಗಾಂವ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಜಿಲ್ಲಾ ಮಕ್ಕಳ ರಕ್ಷಣ ಘಟಕದ ಮಂಜುಳ ಪಾಟೀಲ್, ನೂತನ ವಿದ್ಯಾಲಯದ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸತೀಶಕುಮಾರ ಉಮದಿ, ಕಾರ್ಮಿಕ ಅಧಿಕಾರಿ ಮಂಜುಳು ಪಾಟೀಲ್, ಹಿರಿಯ ಕಾರ್ಮಿಕ ನಿರೀಕ್ಷಕರಾದ ಕೆ.ಎಸ್. ಪ್ರಸನ್ನ,ಶಿವರಾಜ ಪಾಟೀಲ್, ಜಿಲ್ಲಾ ಕಾರ್ಮಿಕ ಅಧಿಕಾರಿಗಳು,ಶರಣಪ್ಪಾ ಹಳಿಮನಿ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕರ  ಸಂತೋಷ ಕುಲಕರ್ಣಿ ಮಕ್ಕಳ ಸಹಾಯವಾಣಿ ಸಿಬ್ಬಂದಿಗಳು ನೂತನ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ಮತ್ತು ಕಾರ್ಮಿಕ ಇಲಾಖೆ ಸಿಬ್ಬಂದಿ ವರ್ಗದವರು ಹಾಜರಿದ್ದರು.