ಬಾಲ್ಯ ವಿವಾಹ ತಡೆಗಟ್ಟಲು ಸಾರ್ವಜನಿಕರ ಸಹಭಾಗಿತ್ವ ಅಗತ್ಯ: ಸಂತೋಷ ಕುಂದರ್

ವಿಜಯಪುರ, ಅ.18: ಬಾಲ್ಯ ವಿವಾಹ ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ ಅರಿವು ಮೂಡಿಸಬೇಕು. ಬಾಲ್ಯ ವಿವಾಹ ತಡೆಗಟ್ಟುವಲ್ಲಿ ಸಾರ್ವಜನಿಕ ಸಹಕಾರ ಅಗತ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳೂ ಆದ ಸಂತೋμï ಎಸ್. ಕುಂದರ್ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ವಿಜಯಪುರ, ಶಿಶು ಅಭಿವೃದ್ಧಿ ಯೋಜನೆ ವಿಜಯಪುರ ನಗರ ಮತ್ತು ಗ್ರಾಮೀಣ ಇವರ ಸಹಯೋಗದಲ್ಲಿ ಅ.16ರಂದು ವಿಜಯಪುರದ ರುಡ್‍ಸೆಟ್ ಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ ಬಾಲ್ಯ ವಿವಾಹ ಮುಕ್ತ ಕರ್ನಾಟಕ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಾರ್ವಜನಿಕರಿಗೆ ಕಾನೂನು ತಿಳುವಳಿಕೆ ಮೂಡಿಸಬೇಕು. ಯಾರೂ ಬಾಲ್ಯವಿವಾಹಕ್ಕೆ ಪೆÇ್ರೀತ್ಸಾಹ ನೀಡಬಾರದು. ಬಾಲ್ಯವಿವಾಹ ಒಂದು ಸಾಮಾಜಿಕ ಪಿಡುಗಾಗಿದ್ದು ಇದನ್ನು ಹೋಗಲಾಡಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ಶ್ರೀಧರ್ ಕುಲಕರ್ಣಿ ಅವರು ಮಾತನಾಡಿ, ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಕೇವಲ ಅಧಿಕಾರಿಗಳμÉ್ಟೀ ಅಲ್ಲದೇ ಸಾರ್ವಜನಿಕರು ಸಹ ಅರಿವು ಪಡೆದು ಮಾಹಿತಿ ನೀಡಿ ಬಾಲ್ಯ ವಿವಾಹಗಳನ್ನು ತಡೆಗಟ್ಟಲು ಸಹಕರಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಕೆ.ಕೆ ಚವ್ಹಾಣ, ಜಿಲ್ಲಾ ನಿರೂಪಣಾಧಿಕಾರಿ ಶ್ರೀಮತಿ ಸಾವಿತ್ರಿ ಗುಗ್ಗರಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಎಸ್.ಸಿ. ಮ್ಯಾಗೇರಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಮತಿ ದೀಪಾಕ್ಷಿ ಜಾನಕಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪೆನಲ್ ವಕೀಲರಾದ ಬಾಬು ಅವತಾಡೆ, , ರುಡ್‍ಸೆಟ್ ಸಂಸ್ಥೆಯ ನಿರ್ದೇಶಕರಾದ ಮುತ್ತಣ್ಣ ಧನಕರ್, ಮೌನೇಶ ಪೆÇೀತದಾರ, ಗುರುರಾಜ ಇಟಗಿ, ಶ್ರೀಮತಿ ಭಾರತಿ ಪಾಟೀಲ ಅಧಿಕಾರಿ,ಸಿಬ್ಬಂದಿ ಉಪಸ್ಥಿತರಿದ್ದರು.