ಬಾಲ ಕಾರ್ಮಿಕತೆ ತಡೆಗೆ ಸಾರ್ವಜನಿಕರ ಸಹಕಾರ ಅಗತ್ಯವಿದೆ

ಸಿರವಾರ,ಜೂ.೧೦-
ಬಾಲ ಕಾರ್ಮಿಕತೆ ತೊಡೆದು ಹಾಕಲು ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳು, ಸಂಘಟನೆಗಳು, ಕಾರ್ಮಿಕ ಸಂಘಟನೆಯವರು, ಹೋಟೆಲ್-ಅಂಗಡಿಗಳ ಮಾಲೀಕರು, ಪಾಲಕರು ಸೇರಿದಂತೆ ಪ್ರತಿಯೊಬ್ಬರ ಸಹಕಾರ ಅಗತ್ಯವಿದೆ ಎಂದು ತಹಶಿಲ್ದಾರ ಸುರೇಶ ವರ್ಮಾ ಹೇಳಿದರು.
ತಹಶಿಲ್ದಾರ ಕಚೇರಿಯಲ್ಲಿ ಕರೆದ ಜೂನ್ ೧೨ ರಂದು ನಡೆಯುವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಬೆಳಿಗ್ಗೆ ಪಟ್ಟಣದಲ್ಲಿ ವಿವಿಧ ಇಲಾಖೆಯ ಸಹಯೋಗದೊಂದಿಗೆ ಬಾಲ ಕಾರ್ಮಿಕ ಪದ್ಧತಿ ವಿರೋಧಿ ಜಾಥಾವನ್ನು ಅರ್ಥಪೂರ್ಣವಾಗಿ ಹಮ್ಮಿಕೊಳ್ಳಬೇಕು.
ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗಾಗಿ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ ತಮ್ಮ ಗುರುತರವಾದ ಕರ್ತವ್ಯವನ್ನು ನಿರ್ವಹಿಸಬೇಕು.ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸೂಕ್ತ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.
ಈ ವೇಳೆ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ತಿಮ್ಮಪ್ಪ ಜಗಲಿ, ಬಿಇಒ ಚಂದ್ರಶೇಖರ ದೊಡ್ಮನಿ, ಪಿಎಸ್‌ಐ ಅವಿನಾಶ್ ಕಾಂಬ್ಳೆ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.