
ಬಳ್ಳಾರಿ, ಅ.07- ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಅಧಿಕಾರಿಗಳು ಹೆಚ್ಚಿನ ಶ್ರಮ ವಹಿಸಬೇಕು. ಬಾಲಕಾರ್ಮಿಕರ ರಕ್ಷಣೆಗೆ ಟಾಸ್‍ಪಾಸ್ಕ್ ರಚಿಸುವ ಬಗ್ಗೆ ಚಿಂತನೆ ನಡೆಸಲಾಗಿದ್ದು, ಸದ್ಯದಲ್ಲೇ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಎಸ್.ಲಾಡ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಅವರು ಇಂದು ಬಳ್ಳಾರಿಯಲ್ಲಿ ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳ ಕಾರ್ಮಿಕರ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡುತ್ತಿದ್ದರು.
ಅಂಗಡಿ, ಹೋಟೆಲ್ ಮತ್ತು ವಾಣಿಜ್ಯ ಮಳಿಗೆಗಳು ಟ್ರೇಡ್ ಲೈಸನ್ಸ್ ಪಡೆಯದೆ ನೋಂದಣಿಯಾಗದೆ ಇದ್ದಲ್ಲಿ ಅಂತಹ ಕಡೆಗೆ ಭೇಟಿ ನೀಡಿ, ಪರಿಶೀಲಿಸಿ ನೋಂದಣಿ ಕಾರ್ಯ ಕೈಗೊಳ್ಳಬೇಕು ಎಂದು
ಕಾರ್ಮಿಕರ ಕಲ್ಯಾಣಕ್ಕಾಗಿ ಇಲಾಖೆಯ ಕೋರ್ಟ್ ಪ್ರಕರಣಗಳ ಇತ್ಯರ್ಥ ಹಾಗೂ ಕರ ಸಂಗ್ರಹದ ಬಗ್ಗೆ ಕಟ್ಟುನಿಟ್ಟಿನ ಕ್ರಮ ವಹಿಸಬೇಕು.
ನಕಲಿ ದಾಖಲಾತಿ ಸೃಷ್ಟಿಸಿ ಕಾರ್ಮಿಕ ಕಾರ್ಡ್‍ಗಳನ್ನು ಪಡೆದಿರುವುದನ್ನು ಪರಿಶೀಲಿಸಿ ರದ್ದುಗೊಳಿಸಬೇಕು ಎಂದು ಸೂಚಿಸಿದರು.
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ನೋಂದಣಿ ಕಾರ್ಮಿಕರಿಗೆ ವೈದ್ಯಕೀಯ ಸೌಲಭ್ಯ, ಹೆರಿಗೆ, ಮದುವೆ ಸಹಾಯಧನ ಸೇರಿದಂತೆ ವಿವಿಧ ಅರ್ಜಿಗಳನ್ನು ತಕ್ಷಣ ವಿಲೇವಾರಿ ಮಾಡಿ ಎಂದು ಹೇಳಿದರು.