ಬಾಲ ಕಾರ್ಮಿಕ ಪದ್ಧತಿಯಿಂದ ಪರಿಣಾಮ ಜಾಗೃತಿ

ಲಿಂಗಸುಗೂರು,ಜೂ.೧೫-
ಬಾಲ ಕಾರ್ಮಿಕ ಪದ್ಧತಿಯಿಂದ ಉಂಟಾಗುವ ಪರಿಣಾಮದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿವರ್ಷ ಜೂನ್ ೧೨ ರಂದು ಭಾರತ ಸೇರಿದಂತೆ ವಿಶ್ವದಾದ್ಯಂತ ಬಾಲ ಕಾರ್ಮಿಕ ವಿರೋಧಿ ದಿನವನ್ನು ಆಚರಿಸಲಾಗುತ್ತದೆ. ಎಂದು ಗುರುಗುಂಟಾ ಎ. ವಯಯದ ಅಂಗನವಾಡಿ ಮೇಲ್ವಚಾರಕಿಯಾದ ಶಿವಲೀಲಾ ಹಿರೇಮಠ ಅವರು ಗುರುಗುಂಟಾ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾ ಆಚರಣೆ ಮಾಡಲಾಯಿತು ನಂತರ ಮಾತನಾಡಿದ ಅವರು
ಬಾಲ ಕಾರ್ಮಿಕ ವಿರೋಧಿ ದಿನದ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ಸಾಮಾಜಿಕ ಪಿಡುಗಾಗಿ ಕಾಡುತ್ತಿರುವ ಸಮಸ್ಯೆ, ಬಾಲ್ಯದಲ್ಲಿ ಆಟವಾಡುತ್ತ, ತನ್ನ ಜೊತೆಗಾರರೊಂದಿಗೆ ಶಾಲೆಗೆ ಹೋಗಿ ಕಲಿಯಬೇಕಾದ ಮಕ್ಕಳು ಹಲವಾರು ಕಾರಣಗಳಿಂದ ಹಾಗೂ ಸಮಸ್ಯೆಗಳಿಂದ ಬಾಲ ಕಾರ್ಮಿಕರಾಗಿ ದುಡಿಯುತ್ತಿರುವುದಾಗಿದೆ.
ಕಟ್ಟಡಗಳ ಕೆಲಸಗಳಲ್ಲಿ, ಅಂಗಡಿ ಮಳಿಗೆಗಳಲ್ಲಿ ಗಾರ್ಮೆಂಟ್ಸ್‌ಗಳಲ್ಲಿ ಬೇಕರಿ, ಗ್ಯಾರೇಜ್, ಹೊಟೇಲ್, ಕಾರ್ಖಾನೆಗಳಲ್ಲಿ, ದೊಡ್ಡ ಮನೆಗಳಲ್ಲಿ ಕೆಲಸದಾಳುಗಳಾಗಿ ಇನ್ನಿತರ ಪ್ರಮುಖ ಸ್ಥಳಗಳಲ್ಲಿ ತಮ್ಮ ದೈಹಿಕ ಹಾಗೂ ಮಾ ಸಾಮರ್ಥ್ಯಕ್ಕೆ ಕಷ್ಟವಾಗುವಂಥ ಕೆಲಸಗಳನ್ನು ಮಾಡುತ್ತಿರ ಇದರಿಂದ ಅವರು ಶಿಕ್ಷಣ ವಂಚಿತರಾಗುತ್ತಿದ್ದಾರೆ.
ಪೌಷ್ಟಿಕ ಆಹಾರ ಕೊರತೆಯಿಂದಾಗಿ ಅನೇಕ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಕೆಲವೊಮ್ಮ ತಮ್ಮ ಜೀವವನ್ನೇ ಕಳೆದುಕೊಳ್ಳುತ್ತಿದ್ದಾರೆ. ಹಾಗಾಗಿ ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಲು, ಬಾಲ ಕಾರ್ಮಿಕ ಪದ್ಧತಿಯಿಂದ ಉಂಟಾಗುವ ಪರಿಣಾಮದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿವರ್ಷ ಜೂನ್ ೧೨ ರಂದು ಭಾರತ ಸೇರಿದಂತೆ ವಿಶ್ವದಾದ್ಯಂತ ಬಾಲ ಕಾರ್ಮಿಕ ವಿರೋಧಿ ದಿನವನ್ನು ಆಚರಿಸಲಾಗುತ್ತದೆ