ಬಾಲ ಹನುಮಾನ ಮಂದಿರ ಜೀರ್ಣೋದ್ಧಾರಕ್ಕೆ ಮನವಿ

ಕಲಬುರಗಿ,ಆ 7: ರೈಲ್ವೆ ನಿಲ್ದಾಣ ನವೀಕರಿಸುವ ಯೋಜನೆಯಲ್ಲಿ ಕಲಬುರಗಿ ರೈಲ್ವೆ ನಿಲ್ದಾಣ ಆವರಣದಲ್ಲಿರುವ ಬಾಲ ಹನುಮಾನ ಮಂದಿರವನ್ನು ಸಂಪೂರ್ಣವಾಗಿ ಜೀರ್ಣೋದ್ಧಾರ ಮಾಡಬೇಕೆಂದು ಆಗ್ರಹಿಸಿ ಹಿಂದೂ ಜಾಗೃತಿ ಸೇನೆ ಜಿಲ್ಲಾ ಘಟಕದ ವತಿಯಿಂದ ರೈಲ್ವೆ ನಿಲ್ದಾಣದಲ್ಲಿ ಕಲ್ಬುರ್ಗಿ ಸಂಸದ ಡಾ.ಉಮೇಶ್ ಜಾಧವ್ ಅವರ ಮುಖಾಂತರ ಕೇಂದ್ರ ರೈಲ್ವೆ ಸಚಿವರಿಗೆ ಮನವಿ ಸಲ್ಲಿಸಲಾಯಿತು.
ಅಮೃತ ಭಾರತ ಯೋಜನೆ ಅಡಿಯಲ್ಲಿ ಕಲಬುರಗಿ ರೈಲ್ವೆ ನಿಲ್ದಾಣವನ್ನು ಸಂಪೂರ್ಣ ಡಿಜಿಟಲ್ ಮಾದರಿಯಲ್ಲಿ ನವೀಕರಿಸುತ್ತಿರುವುದು ಸಂತೋಷದ ವಿಷಯ ಎಂದು ಹಿಂದೂ ಜಾಗೃತಿ ಸೇನೆ ಮುಖಂಡರು ನುಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ಲಕ್ಷ್ಮಿಕಾಂತ್ ಸ್ವಾದಿ,ಶಂಕರ್ ಚೋಕ,ದಶರಥ ಇಂಗೋಳೇ,ಪ್ರಕಾಶ್ ವಾಗ್ಮೊರೆ,ರಾಜಕುಮಾರ್ ಕಮಲಾಪುರ,ಮಹಾದೇವ ಕೋಟನೂರ್ ಉಪಸ್ಥಿತರಿದರು