ಬಾವಲಿ ಚೆಕ್‍ಪೆÇೀಸ್ಟ್‍ನಲ್ಲಿ ಕಟ್ಟುನಿಟ್ಟಿನ ತಪಾಸಣೆ

ಮೈಸೂರು, ಡಿ.3:- ರೂಪಾಂತರಿ ವೈರಸ್ ಒಮಿಕ್ರಾನ್ ಆತಂಕ ಹಿನ್ನೆಲೆಯಲ್ಲಿ ಕರ್ನಾಟಕ ಕೇರಳ ಗಡಿಯಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗುತ್ತಿದೆ.
ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಬಾವಲಿ ಚೆಕ್ ಪೆÇೀಸ್ಟ್ ನಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗುತ್ತಿದೆ. ನಕಲಿ ಆರ್.ಟಿ.ಪಿ.ಸಿ.ಆರ್ ಮೂಲಕ ರಾಜ್ಯಕ್ಕೆ ಜನರು ಬರುವ ಆತಂಕ ಹಿನ್ನೆಲೆಯಲ್ಲಿ ಗಡಿಯಲ್ಲಿ ಮೊಬೈಲ್ ಆಫ್ ಮೂಲಕ ಆರ್.ಟಿ.ಪಿ.ಸಿ.ಆರ್ ವರದಿ ಸ್ಕ್ಯಾನ್ ಮಾಡಲಾಗುತ್ತಿದೆ. ಕ್ಯೂ ಆರ್ ಕೋಡ್ ಸ್ಕ್ಯಾನ್ ಮೂಲಕ ಪರೀಕ್ಷೆ ನಡೆಸಲಾಗುತ್ತಿದೆ.
ಆರ್.ಟಿ.ಪಿ.ಸಿ.ಆರ್ ನೆಗೆಟಿವ್ ವರದಿ ತೋರಿಸಿದರೆ ಅದನ್ನು ಸ್ಕ್ಯಾನ್ ಮೂಲಕ ಪರೀಕ್ಷಿಸಿ ಪತ್ತೆ ಹಚ್ಚಲಾಗುತ್ತಿದೆ. ಯಾವಾಗ ತಪಾಸಣೆ ಮಾಡಿಸಿದ್ದಾರೆ ವ್ಯಕ್ತಿಯ ವಿವರ ಎಲ್ಲವೂ ಕೂಡ ಪತ್ತೆಯಾಗಲಿದೆ. ನಕಲಿ ಕೋವಿಡ್ ವರದಿ ತೆಗೆದುಕೊಂಡು ಬರುತ್ತಿದ್ದವರಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಕೇರಳದಿಂದ ಬರುವ ಪ್ರತಿಯೊಬ್ಬರ ಪರೀಕ್ಷೆಯನ್ನು ಆರೋಗ್ಯ ಇಲಾಖೆ ಸಿಬ್ಬಂದಿಗಳು ನಡೆಸುತ್ತಿದ್ದಾರೆ.
ಈ ಹಿಂದೆ ನಕಲಿ ವರದಿ ತಂದು ರಾಜ್ಯಕ್ಕೆ ಪ್ರಯಾಣಿಕರು ಬರುತ್ತಿದ್ದರು. ಇದೀಗ ಕಟ್ಟುನಿಟ್ಟಿನ ಕ್ರಮಕ್ಕೆ ಜಿಲ್ಲಾಡಳಿತ ಮುಂದಾಗಿದೆ.