
ಬೆಂಗಳೂರು,ಸೆ.೧೧- ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ನಡೆಸುತ್ತಿರುವ ಬೆಂಗಳೂರು ಬಂದ್ ಬಿಸಿ ಟೀಂ ಇಂಡಿಯಾ ದಿಗ್ಗಜ ಕ್ರಿಕೆಟಿಗ ಅನಿಲ್ ಕುಂಬ್ಳೆಗೂ ತಟ್ಟಿದೆ.ಕ್ಯಾಬ್ ಸಿಗದೇ ಅನಿಲ್ ಕುಂಬ್ಳೆ ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣ ಮಾಡಿ ಮನೆಗೆ ವಾಪಾಸ್ಸಾಗಿದ್ದು,ಈ ಸಂಬಂಧ ಟ್ವೀಟ್ ಮಾಡಿರುವ ಅನಿಲ್ ಕುಂಬ್ಳೆ ಗಮನ ಸೆಳೆದಿದ್ದಾರೆ.ಟ್ವೀಟ್ ಮಾಡಿರುವ ಕನ್ನಡಿಗ ಅನಿಲ್ ಕುಂಬ್ಳೆ,ಇಂದು ಏರ್‌ಪೋರ್ಟ್‌ನಿಂದ ಮನೆಗೆ ಬರಲು ಬಿಎಂಟಿಸಿ ಬಸ್ ಸೇವೆಯನ್ನು ಬಳಸಿಕೊಂಡೆ ಎಂದು ಬರೆದುಕೊಂಡಿದ್ದಾರೆ.
ಅನಿಲ್ ಕುಂಬ್ಳೆ ಅವರ ಸರಳ ನಡೆ ಕ್ರಿಕೆಟ್ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ