ಬಿಎಸ್‌ವೈ ಆರೋಗ್ಯ ಸ್ಥಿರ : ಸುಧಾಕರ್

ಬೆಂಗಳೂರು, ಏ. ೧೭- ಕೊರೊನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿರುವ ಮುಖ್ಯಮಂತ್ರಿ ಯಡಿಯೂರಪ್ಪನವರ ಆರೋಗ್ಯ ಸ್ಥಿರವಾಗಿದೆ. ಯಾವುದೇ ಸಮಸ್ಯೆ ಇಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಹೇಳಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಶ್ವಾಸಕೋಶ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂಬ ವರದಿಗಳನ್ನು ತಳ್ಳಿ ಹಾಕಿದ ಅವರು ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲ. ವೈದ್ಯರು ಎಲ್ಲ ರೀತಿಯ ಪರೀಕ್ಷೆ ಮಾಡಿದ್ದಾರೆ. ಚಿಕಿತ್ಸೆ ನಡೆದಿದೆ ಎಂದು ಅವರು ಹೇಳಿದರು.
ಮುಖ್ಯಮಂತ್ರಿ ಯಡಿಯೂರಪ್ಪನವರು ಕೆಲವೇ ದಿನಗಳಲ್ಲಿ ಸೋಂಕಿನಿಂದ ಗುಣಮುಖರಾಗಲಿದ್ದಾರೆ. ಕನ್ನಡಿಗರ ಆಶೀರ್ವಾದ ಅವರ ಮೇಲಿದ್ದು, ಬಹುಬೇಗ ಆಸ್ಪತ್ರೆಯಿಂದ ಡಿಸಾರ್ಜ್ ಆಗಿ ರಾಜ್ಯದ ಆಡಳಿತದ ಚುಕ್ಕಾಣಿಯನ್ನು ಮುಂದುವರೆಸಲಿದ್ದಾರೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು