ಬಿಎಸ್‌ವೈ ಬದಲಾವಣೆ ಇಲ್ಲ: ಜೋಶಿ ಸ್ಪಷ್ಟನೆ

ಮಂಗಳೂರು, ನ.೫- ಬಿ.ಎಸ್. ಯಡಿಯೂರಪ್ಪನವರೇ ನಮ್ಮ ನಾಯಕರು. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟಪಡಿಸಿದ್ದಾರೆ. ಮಂಗಳೂರಿನಲ್ಲಿ ನಡೆಯುತ್ತಿರುವ ಕಾರ್‍ಯಕಾರಿಣಿ ಸಭೆಗೆ ಮುನ್ನ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ತಳ್ಳಿ ಹಾಕಿದರು.
ಇನ್ನು ಪತ್ರಕರ್ತ ರಾಷ್ಟ್ರೀಯ ವಾಹಿನಿ ನಿರೂಪಕ ಅರ್ನಬ್ ಗೋಸ್ವಾಮಿ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಅವರು, ಮಹಾರಾಷ್ಟ್ರ ಸರ್ಕಾರದ ನಿಲುವನ್ನು ಖಂಡಿಸಿದ್ದಾರೆ. ಈ ಬಗ್ಗೆ ವಿರೋಧ ವ್ಯಕ್ತಪಡಿಸಿರುವರು ಅವರು, ಮಹಾರಾಷ್ಟ್ರ ಸರ್ಕಾರದ ಅಂತ್ಯ ಸಮೀಪಿಸುತ್ತಿದೆ ಎಂದಿದ್ದಾರೆ.
ಈ ಹಿಂದೆ ಅರ್ನಬ್ ಗೋಸ್ವಾಮಿ ಮೋದಿ ವಿರುದ್ಧ ಕೂಡಾ ಮಾತನಾಡಿದ್ದರು. ಆದರೆ, ಮೋದಿ ಸರಕಾರ ಎಂದಿಗೂ ಅವರ ವಿರುದ್ಧ ತಿರುಗಿ ಬಿದ್ದಿಲ್ಲ. ಮಾಧ್ಯಮ ತಮ್ಮ ಜವಾಬ್ದಾರಿ ಮಾಡುತ್ತಿದೆ. ಆದರೆ ಮಹಾರಾಷ್ಟ್ರ ಸರಕಾರ ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ ಮಾಡಿದೆ. ಮಹಾರಾಷ್ಟ್ರ ಸರ್ಕಾರದ ನಡೆಯನ್ನು ವಿರೋಧಿಸುತ್ತೇನೆ ಎಂದು ಅವರು ಹೇಳಿದ್ದಾರೆ.