ಬಿಎಸ್‌ವೈ ವಿರುದ್ಧ ತನಿಖೆಗೆ ಕೋರ್ಟ್ ಅಸ್ತು


ಬೆಂಗಳೂರು,ಜ.೫- ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧದ ಡಿ ನೋಟಿಫಿಕೇಷನ್ ಪ್ರಕರಣದ ಎಫ್‌ಐಆರ್ ರದ್ದುಪಡಿಸಲು ರಾಜ್ಯ ಉಚ್ಛ ನ್ಯಾಯಾಲಯ ನಿರಾಕರಿಸಿದ್ದು,ಲೋಕಾಯುಕ್ತ ತನಿಖೆಗೆ ಹಸಿರು ನಿಶಾನೆ ತೋರಿದೆ.
ಈ ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ದಾಖಲಾಗಿದ್ದ ಡಿ ನೋಟಿಫಿಕೇಷನ್ ಪ್ರಕರಣದ ಎಫ್‌ಐಆರ್‌ನ್ನು ರದ್ದುಗೊಳಿಸುವಂತೆ ಕೋರಿ ಮುಖ್ಯಮಂತ್ರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿರುವ ಉಚ್ಛನ್ಯಾಯಾಲಯ, ತನಿಖೆ ಮುಂದುವರೆಸುವಂತೆ ಲೋಕಾಯುಕ್ತ ಪೊಲೀಸರಿಗೆ ಸೂಚನೆ ನೀಡಿದೆ.
ಕೆಲ ದಿನಗಳ ಹಿಂದೆ ಕೆಳ ನ್ಯಾಯಾಲಯದಲ್ಲೂ ಮುಖ್ಯಮಂತ್ರಿ ಯಡಿಯೂರಪ್ಪನವರ ಅರ್ಜಿ ವಜಾ ಆಗಿ ತನಿಖೆಗೆ ನ್ಯಾಯಾಲಯ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಯಡಿಯೂರಪ್ಪನವರು ಸಲ್ಲಿಸಿದ್ದ ರಿಟ್ ಅರ್ಜಿವಿಚಾರಣೆ ನಡೆಸಿದ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿ ತನಿಖೆ ಮುಂದುವರೆಸಿ ಸೂಚನೆ ನೀಡಿದೆ.