ಬಿಎಸ್‍ವೈ ಪ್ರಶ್ನಾತೀತ ನಾಯಕರು: ಶಾಸಕ ಸುಭಾಷ್ ಆರ್ ಗುತ್ತೇದಾರ

ಆಳಂದ:ಮೇ.28:ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ರಾಜ್ಯ ರಾಜಕೀಯದ ದೃಷ್ಟಿಯಿಂದ ಒಳ್ಳೆಯದಲ್ಲ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ನಮ್ಮ ಪ್ರಶ್ನಾತೀತ ನಾಯಕರಾಗಿದ್ದಾರೆ ಎಂದು ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಹೇಳಿದ್ದಾರೆ.

ಬಿ ಎಸ್ ಯಡಿಯೂರಪ್ಪನವರಿಂದ ಮಂತ್ರಿಗಿರಿ ಮತ್ತು ಅನೇಕ ಅಧಿಕಾರ ಅನುಭವಿಸಿದ ಕೆಲವರು ಇಂದು ತೆರೆಮರೆಯಲ್ಲಿ ನಿಂತು ಹೈಕಮಾಂಡಗೆ ಯಡಿಯೂರಪ್ಪನವರ ವಿರುದ್ಧ ಚಾಡಿ ಹೇಳುವ ಕೆಲಸ ಮಾಡುತ್ತಿದ್ದಾರೆ ಇದು ಅವರಿಗೆ ಶೋಭೆ ತರುವುದಿಲ್ಲ ಎಂದು ತಿಳಿಸಿದ್ದಾರೆ.

ಕೋರೋನಾದಂತಹ ಕಷ್ಟ ಕಾಲದಲ್ಲಿಯೂ ತಮ್ಮ ಆರೋಗ್ಯವನ್ನು ಲೆಕ್ಕಿಸದೇ ಇಳಿಯವಸ್ಸಿನಲ್ಲಿಯೂ ಕಾಲಿಗೆ ಚಕ್ರಕಟ್ಟಿಕೊಂಡಂತೆ ಮುಖ್ಯಮಂತ್ರಿಗಳು ಕೆಲಸ ಮಾಡುತ್ತಿದ್ದಾರೆ ಇಂತಹ ಸಮಯದಲ್ಲಿ ನಾಯಕತ್ವ ಬದಲಾವಣೆಯ ವಿಷಯ ಸಮಂಜಸವಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ತಾವು ಪಕ್ಷ ನಿಷ್ಟೆ ಹೊಂದಿದ್ದು ಮುಖ್ಯಮಂತ್ರಿಗಳ ಮೇಲೆ ಅಪಾರವಾದ ನಂಬಿಕೆಯಿದೆ ಬಿ ಎಸ್ ವೈ ಅವರೇ ಪೂರ್ಣಾವಧಿಯವರೆಗೆ ಮುಖ್ಯಮಂತ್ರಿಗಳಾಗಿರುತ್ತಾರೆ ಎನ್ನುವ ವಿಶ್ವಾಸವಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.