ಬಿಎಸ್ ವೈ ಯವರ ಅಭಿವೃದ್ಧಿ ಕಾರ್ಯಗಳಿಗೆ ದೊರಕಿದ ಗೆಲುವು : ಅಷ್ಠಗಿ

ಕಲಬುರಗಿ,ನ.10:ಕರ್ನಾಟಕ ಉಪ ಚುನಾವಣೆಗಳ ಗೆಲುವು ಮುಖ್ಯಮಂತ್ರಿ ಬಿ ಎಸ್ ಯಡಿಯುರಪ್ಪನವರ ಸರ್ಕಾರದ ಅಭಿವೃದ್ಧಿ ಕಾರ್ಯಗಳಿಗೆ ದೊರಕಿದ ಅಭೂತಪೂರ್ವ ಗೆಲುವು ಎಂದು ಕಲಬುರಗಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಅಂಬಾರಾಯ ಅಷ್ಠಗಿ ಹೇಳಿದ್ದಾರೆ.
ರಾಜ್ಯದ ವಿಧಾನ ಸಭೆ ಹಾಗೂ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವು ಮುಖ್ಯಮಂತ್ರಿಗಳ ಕಾರ್ಯ ದಕ್ಷತೆಗೆ ದೊರಕಿದ ನೈಜ ಗೆಲುವು ಇದಾಗಿದ್ದು ಮುಂಬರುವ ದಿನಗಳಲ್ಲಿ ಇನ್ನೂ ಹತ್ತು ಹಲವು ಜನಪರ ಕಾರ್ಯಕ್ರಮಗಳು ರಾಜ್ಯ ಸರ್ಕಾರ ಕೈಗೊಳ್ಳುವ ನಿರೀಕ್ಷೆ ಇದೆ. ಬಿಹಾರ ದಲ್ಲಿನ ಫಲಿತಾಂಶ ರಾಷ್ಟ್ರ ಮಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಯವರ ಆಡಳಿತಕ್ಕೆ ಮತ್ತೊಮ್ಮೆ ಜನ ಬೆಂಬಲ ವ್ಯಕ್ತವಾಗಿರುವುದು ಕಂಡು ಬರುತ್ತದೆ. ಮುಂದಿನ ದಿನಗಳಲ್ಲಿ ರಾಜ್ಯ ಮತ್ತು ರಾಷ್ಟ್ರದಲ್ಲಿ ಅಭಿವೃದ್ಧಿ ಹಾಗೂ ಆರ್ಥಿಕತೆಗೆ ವೇಗ ದೋರಕಲಿದೆ ಎಂದು ಅಂಬಾರಾಯ ಅಷ್ಠಗಿ ಹೇಳಿದ್ದಾರೆ