ಬಿಎಸ್ ವೈ ರಾಜೀನಾಮೆ‌ ಹೇಳಿಕೆ ಹಿಂದೆ ಬೇರೆ ತಂತ್ರಗಾರಿಕೆ:ಡಿಕೆಶಿ

ಬೆಂಗಳೂರು, ಜೂ.6-ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ರಾಜೀನಾಮೆ ಕುರಿತ ಹೇಳಿಕೆ ಹಿಂದೆ ಬೇರೆಯದೇ ತಂತ್ರಗಾರಿಕೆ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮುಖ್ಯಮಂತ್ರಿ ಹೇಳಿಕೆಯ ಬಗ್ಗೆ ರಾಜಕೀಯ ಪಡಸಾಲೆಯಲ್ಲಿ ವಿಭಿನ್ನ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.
ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ‌ ಮಾತನಾಡಿದ ಅವರು, ಯಡಿಯೂರಪ್ಪ ನವರ ಹೇಳಿಕೆಯನ್ನು ಎರಡ್ಮೂರು ರೀತಿಯಲ್ಲಿ ಬೇಕಾದರೂ ವಿಶ್ಲೇಷಣೆ ಮಾಡಬಹುದು. ನನ್ನನ್ನು ಮುಟ್ಟಿ ನೋಡಿ ಎಂಬ ಎಚ್ಚರಿಕೆ ಇರಬಹುದು, ನಾನು ಶಿಸ್ತಿನ ಸಿಪಾಯಿ ಎಂದೂ ಇರಬಹುದು. ರಾಜ್ಯ ಹಾಗೂ ಬಿಜೆಪಿ ರಾಜಕಾರಣದಲ್ಲಿ ಯಡಿಯೂರಪ್ಪ ಗಟ್ಟಿ ನಾಯಕ ಎಂದು ಹೇಳಿದರು.
ಬಿಜೆಪಿಯಲ್ಲಿ ಏಳೆಂಟು ಮುಖಂಡರು ತಾವೇ ಮುಖ್ಯಮಂತ್ರಿ ಯಾಹಲು ಸಿದ್ಧವಾಗಿದ್ದಾರೆ. ಮುಂದೆ ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಎನ್ನುವವರು, ಹಿಂದೆ ತಾವೇ ಸೂಟ್ ಹೊಲಿಸಿ, ಮುಹೂರ್ತ ಇಟ್ಟುಕೊಂಡು ಸಿದ್ಧವಾಗಿದ್ದಾರೆ. ಎಲ್ಲವೂ ನಮ್ಮಗೆ ಗೊತ್ತಿದೆ. ಬಿಜೆಪಿಯವರು ಶಿಸ್ತನ್ನು ಕಳೆದುಕೊಂಡಿದ್ದಾರೆ ಎಂದು ಡಿಕೆ ಶಿವಕುಮಾರ್ ಟೀಕಿಸಿದರು.