ಬಿಎಸ್ ವೈ ಹೇಳಿಕೆ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಲ್ಲ: ಬೊಮ್ಮಾಯಿ

ಬೆಂಗಳೂರು, ಜು‌.23-ಮಾಜಿ‌‌ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎಂದರೆ ಒಂದು ದೊಡ್ಡ ಶಕ್ತಿ. ನಾಲ್ಕು ದಶಕಗಳಿಂದ ರಾಜಕಾರಣದಲ್ಲಿದ್ದಾರೆ. ಅವರ ಹೇಳಿಕೆಯಿಂದ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಶಿಕಾರಿಪುರದಲ್ಲಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ತಿಗಳು, ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಇಂದು ಮಾತುಕತೆ ನಡೆಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ವಿಜಯೇಂದ್ರ ಅವರು ಶಿಕಾರಿಪುರದಲ್ಲಿ ಸ್ಪರ್ಧಿಸುವುದರ ಬಗ್ಗೆ ಯಡಿಯೂರಪ್ಪನವರು ನಿನ್ನೆ ನೀಡಿದ್ದು ಸಲಹೆ ಅಷ್ಟೇ. ಕ್ಷೇತ್ರದ ಜನ ಪದೆ ಪದೇ ಹೇಳುತ್ತಿದ್ದರು. ಹಾಗಾಗಿ ಯಡಿಯೂರಪ್ಪನವರು ನಿನ್ನೆ ಆ ಹೇಳಿಕೆ ನೀಡಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಚುನಾವಣೆಯಲ್ಲಿ ವಿಜಯೇಂದ್ರ ಸ್ಪರ್ಧಿಸುವುದು ಮಾತ್ರವಲ್ಲ. ಇಡೀ ರಾಜ್ಯದಲ್ಲಿ ಸ್ಪರ್ಧಿಸುವವರ ಕುರಿತು ಮೋದಿ, ಅಮಿತ್ ಶಾ ನಿರ್ದರಿಸುತ್ತಾರೆ ಎಂದರು.
ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪ ನವರು ಕೆಳಗಿಳಿದಾಗ ಇಕ್ಕಟ್ಟು ಸೃಷ್ಟಿಸಲಿಲ್ಲ.ಈಗ ಸೃಷ್ಟಿ ಮಾಡುತ್ತಾರಾ? ಈ ಎಲ್ಲ ವಿಚಾರಗಳ ಬಗ್ಗೆ ಹೈಕಮಾಂಡ್ ನಿರ್ಧರಿಸಲಿದೆ ಎಂದು ಬೊಮ್ಮಾಯಿ ತಿಳಿಸಿದರು.