
(ಸಂಜೆವಾಣಿ ವಾರ್ತೆ)
ಬಳ್ಳಾರಿ, ಮೇ.02: ರಾಜ್ಯದಲ್ಲಿ ಈ ವರೆಗೆ ಬಿಜೆಪಿ ಸ್ವಂತಿಕೆಯಿಂದ ಅಧಿಕಾರಕ್ಕೆ ಬರದೆ ವಾಮಮಾರ್ಗದಲ್ಲಿಯೇ ಅಧಿಕಾರಕ್ಕೆ ಬಂದಿದೆ. ಅಗತ್ಯವಸ್ತುಗಳ ಮೇಲೆ ಜಿಎಸ್ಟಿ ವಿಧಿಸಿ ರಾಕ್ಷಸ ರೂಪದಲ್ಲಿ ಬಡಜನರ ರಕ್ತ ಕುಡಿಯುತ್ತಿದೆ. ಅದಕ್ಕಾಗಿ ಜನತೆ ಈ ಬಾರಿ ಚುನಾವಣೆಯಲ್ಲಿ ಆ ಪಕ್ಷಕ್ಕೆ ಜನತೆ ತಕ್ಕ ಪಾಠ ಕಲುಸಲಿದ್ದು. ಕಂಪ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜೆ.ಎನ್.ಗಣೇಶ್ ಮತ್ತೆ ಗೆಲುವು ಸಾಧಿಸುವುದು ನಿಶ್ಚಿತ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ಅಲ್ಲಂ ವೀರಭದ್ರಪ್ಪ ಹೇಳಿದ್ದಾರೆ.
ಅವರು ನಿನ್ನೆ ಕಂಪ್ಲಿ ತಾಲೂಕಿನ ಎಮ್ಮಿಗನೂರು ಗ್ರಾಮದಲ್ಲಿ ಎಐಸಿಸಿ ವೀಕ್ಷಕ, ಮಹಾರಾಷ್ಟ್ರದ ಮಾಜಿ ಸಚಿವ ವಸಂತ ಪುರುಕಿ ಅವರೊಂದಿಗೆ
ಸುದ್ದಿಗೋಷ್ಠಿ ನಡೆಸಿ ಮಾತನಾಡುತ್ತಿದ್ದರು. ಬೆಲೆ ಏರಿಕೆಯಿಂದ ಬಡಜನರ ಕೆಂಣ್ಣಿಗೆ ಗುರಿಯಾಗಿರುವ ಬಿಜೆಪಿಯ ಆಟ ಈ ಚುನಾವಣೆಯಲ್ಲಿ ನಡೆಯುವುದಿಲ್ಲ.
2 ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿದ್ದ ಪ್ರಧಾನಿ ಮೋದಿ ಎಂಟು ವರ್ಷವಾದರೂ ಆ ಬಗ್ಗೆ ಚಕಾರ ಎತ್ತುತ್ತಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆಯನ್ನು ನೋಡಿ ಸಹಿಸಲಾಗದೆ ಪದೇಪದೇ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆಂದರು.
ಈ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲುದ್ದು. ನೀಡಿದ ಐದು ಗ್ಯಾರೆಂಟಿಗಳನ್ನು ಈಡೇರಿಸುವುದು ಖಚಿತ ಇದರ ಬಗ್ಗೆ ಬಿಜೆಪುಯ ಅಪ ಪ್ರಚಾರದ ಬಗ್ಗೆ ಮತದಾರರು ಕಿವಿಗೊಡಬೇಕಿಲ್ಲ ಎಂದರು.
ಶಾಸಕರ ಜೆ. ಎನ್. ಗಣೇಶ್ ವಿರೋಧ ಪಕ್ಷದ ಶಾಸಕರಾಗಿದ್ದರೂ ಅಧಿಕಾರಿಗಳ ಬಳಿ ದುಂಬಾಲುಬಿದ್ದು ಕ್ಷೇತ್ರದ ಅಭಿವೃದ್ಧಿಗೆ ಅಧಿಕ ಮೊತ್ತದ ಅನುದಾನ ತಂದಿದ್ದಾರೆ. ಕ್ಷೇತ್ರದ ಹಿತದೃಷ್ಟಿಯಿಂದ ಅವರನ್ನು ಮತ್ತೊಮ್ಮೆ ಆಯ್ಕೆಮಾಡಬೇಕೆಂದು ಜನರಲ್ಲು ಮನವಿ ಮಾಡುವುದಾಗಿ ಹೇಳಿದರು.
ಶಾಸಕ ಜೆ.ಎನ್.ಗಣೇಶ್ ಮಾತನಾಡಿ, ಪಕ್ಷದಲ್ಲಿ ಸಣ್ಣಪುಟ್ಟ ಬಿನ್ನಾಭಿಪ್ರಾಯಗಳಿವೆ. ಅವುಗಳನ್ನು ಸರಿಪಡಿಸಿಕೊಂಡು ಎಲ್ಲರನ್ನು ವಿಶ್ವಾಸಕ್ಕೆ ಪಡೆದು ಚುನಾವಣೆ ಎದುರಿಸಲಾಗುವುದೆಂದರು.
ಕೆಪಿಸಿಸಿಯ ಪ್ರಚಾರ ಸಮಿತಿಯ ಸಂಯೋಜಕ ಅಲ್ಲಂ ಪ್ರಶಾಂತ್, ಸದಾಶಿವಪ್ಪ. ಹರೀಶ್ ರೆಡ್ಡಿ ಮೊದಲಾದವರು ಇದ್ದರು.