ಬಿಜೆಪಿಗೆ ತಕ್ಕ ಪಾಠ ಕಲಿಸಿ: ಒಮರ್

ಶ್ರೀನಗರ,ಏ.೪- ಜಮ್ಮು ಕಾಶ್ಮೀರಕ್ಕೆ ನೀಡಲಾಗಿದ್ದ ಸಂವಿಧಾನದ ವಿಶೇಷ ಸ್ಥಾನಮಾನ ಕಲ್ಪಿಸುವ ಆರ್ಟಿಕಲ್ ೩೭೦ ರದ್ದು ಮಾಡಿದ ಬಿಜೆಪಿಗೆ ಯಾವುದೇ ಕಾರಣಕ್ಕೂ ಮತ ನೀಡಬೇಡಿ ಎಂದು ನ್ಯಾಷನಲ್ ಕಾನ್ಪರೆನ್ಸ್ ಹಿರಿಯ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಜನರಿಗೆ ಮನವಿ ಮಾಡಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ, ಬಿಜೆಪಿಗೆ ಕಣಿವೆ ಭಾಗದ ಜನರೆಲ್ಲಾ ಒಂದೇ ಪ್ರಶ್ನೆ ಕೇಳಬೇಕಾಗಿದೆ, ೨೦೧೯ ರ ಆಗಸ್ಟ್ ೫ ರಂದು ತೆಗೆದುಕೊಂಡ ನಿರ್ಧಾರ ಸರಿಯೋ ತಪ್ಪೋ ಅದಕ್ಕೆ ಬಿಜೆಪಿಗೆ ಉತ್ತರ ನೀಡಬೇಕಾದರೆ ಈ ಚುನಾವಣೆಯಲ್ಲಿ ಬಿಜೆಪಿಗೆ ಯಾರೂ ಮತ ನೀಡಬಾರದು ಎಂದು ಹೇಳಿದ್ದಾರೆ.
೩೭೦ನೇ ವಿಧಿಯನ್ನು ರದ್ದುಪಡಿಸುವ ಮತ್ತು ಜಮ್ಮು ಮತ್ತು ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶಕ್ಕೆ ಇಳಿಸಿದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಈ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕಾಗಿದೆ. ಹೀಗಾಗಿ ಯಾರೂ ಬಿಜೆಪಿಗೆ ಮತ ನೀಡಬೇಡಿ ಎಂದಿದ್ದಾರೆ.
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ ಸಂವಿಧಾನದ ೩೭೦ ನೇ ವಿಧಿ ರದ್ದುಗೊಳಿಸಿದ ನಂತರ ೨೦೦ ದಿನಗಳ ಬಂಧನದಲ್ಲಿ ಕಳೆದಿದ್ದ ನ್ಯಾಷನಲ್ ಕಾನ್ಫರೆನ್ಸ್ ನಾಯಕ ತಮ್ಮ ಪಕ್ಷದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿ ಜಮ್ಮು ಕಾಶ್ಮೀರದಲ್ಲಿ ಬಿಜೆಪಿಗೆ ಮತ ಹಾಕದಿರುವ ಮೂಲಕ ತಕ್ಕ ಪಾಠ ಕಲಿಸಬೇಕಾಗಿದ ಎಂದು ತಿಳಿಸಿದ್ದಾರೆ.
ಕೇಂದ್ರದ ಬಿಜೆಪಿ ಸರ್ಕಾರದ ಈ ನಿರ್ಧಾರ ಕಣಿವೆ ಪ್ರದೇಶದ ಸ್ವೀಕಾರಾರ್ಹವಲ್ಲ ಎಂಬ ಸಂದೇಶವನ್ನು ಜನರು ತಮ್ಮ ಮತದ ಮೂಲಕ ಕಳುಹಿಸಬೇಕು, “ನೀವು ಮೋಸ ಹೋದರೆ ಮತ್ತು ೨೦೧೯ರ ಆಗಸ್ಟ್ ೫ರಂದು ಆದ ಅನ್ಯಾಯ ಮುಂದೆ ನಿರಂತರವಾಗಿ ಆಗಲಿದೆ. ಅದಕ್ಕೆ ಅವಕಾಶ ಮಾಡಿಕೊಡಬೇಡಿ ಎಂದಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯಿದೆ, ೨೦೧೯ ರ ಮೂಲಕ, ಹಿಂದಿನ ರಾಜ್ಯವನ್ನು ಸಹ ವಿಭಜಿಸಲಾಯಿತು ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶವಾಗಿ ವಿಂಗಡಿಸಲಾಗಿದೆ. ಲಡಾಖ್ ಸಾಂವಿಧಾನಿಕ ಖಾತರಿಗಳಿಗಾಗಿ, ಆರನೇ ಶೆಡ್ಯೂಲ್ ಅಡಿಯಲ್ಲಿ ಉದ್ಯೋಗಗಳು, ಭೂಮಿ ಮತ್ತು ಇತರ ಸವಲತ್ತುಗಳಿಗಾಗಿ ಪ್ರತಿಭಟನೆಗಳಿಗೆ ಸಾಕ್ಷಿಯಾಗಿದೆ,