
ಸಂಜೆವಾಣಿ ವಾರ್ತೆ
ಕೂಡ್ಲಿಗಿ. ಏ. 20 :- ಕೂಡ್ಲಿಗಿ ಕ್ಷೇತ್ರದಲ್ಲಿ ಬುಧವಾರ ನಡೆದ ಉಮೇದುವಾರಿಕೆ ಸಲ್ಲಿಕೆ ವೇಳೆ ಬಿಜೆಪಿ ಮುಖಂಡ ಬಂಗಾರು ಹನುಮಂತು ಅವರು ಮಧ್ಯಾಹ್ನ ಚುನಾವಣಾಧಿಕಾರಿ ಕಚೇರಿಗೆ ಆಗಮಿಸಿ ಬಿಜೆಪಿಯಿಂದ ನಾಮಪತ್ರ ಸಲ್ಲಿಸಿದರು.
ಆ ಮೂಲಕ ಬಿಜೆಪಿ ಪಾಳಯದಲ್ಲಿ ಬಂಗಾರು ಹನುಮಂತು ನಡೆ ಅಚ್ಚರಿ ಮೂಡಿಸಿತು. ಬಿಜೆಪಿಯಿಂದ ಬೆಳಗ್ಗೆ 11 ಗಂಟೆಗೆ ಬಿಜೆಪಿ ಪ್ರಮುಖ ಅಭ್ಯರ್ಥಿ ಲೋಕೇಶ್ ವಿ.ನಾಯಕ ಅಪಾರ ಬೆಂಬಲಿಗರ ಜೊತೆ ಬಂದು ನಾಮಪತ್ರ ಸಲ್ಲಿಸಿ ತೆರಳಿದ ನಂತರ, ಮಧ್ಯಾಹ್ನ ಬಂಗಾರು ಹನುಮಂತು ಅವರು ತಮ್ಮ ಬೆಂಬಲಿಗರೊಂದಿಗೆ ಆಗಮಿಸಿ ಇದೇ ಬಿಜೆಪಿ ಪಕ್ಷದಿಂದ ಉಮೇದುವಾರಿಕೆ ಸಲ್ಲಿಸಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ ಹಾಗೂ ಪಕ್ಷದ ನಡೆಯನ್ನು ಬಿಟ್ಟಿಲ್ಲ ಅವರ ಮಾರ್ಗದರ್ಶನದಲ್ಲಿ ಪಕ್ಷದ ಹಿರಿಯರ ಮಾರ್ಗದರ್ಶನದಲ್ಲಿ ಮುನ್ನಡೆದಿದ್ದೇನೆ ಎಂದು ಬಿಜೆಪಿಯ ಬಂಗಾರು ಹನುಮಂತು ತಿಳಿಸಿದರು.