ಬಿಜೆಪಿಗೆ ಸೇರಿದ 100ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು

ದಾವಣಗೆರೆ.ಮೇ.೫: ಉತ್ತರ ವಿಧಾನ ಸಭಾ ಕ್ಷೇತ್ರದ 31ನೇ ವಾರ್ಡ್ ನ 100ಕ್ಕೂ ಹೆಚ್ಚು ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ತೊರೆದು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಭಾರತೀಯ ಜನತಾ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು.31ನೇ ವಾರ್ಡ್ ನಲ್ಲಿ ಉತ್ತರ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಾಗರಾಜ್ ಲೋಕಿಕೆರೆ ಅವರು ಮತಪ್ರಚಾರದ ವೇಳೆ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಗೊಂಡು ನಾಗರಾಜ್ ಲೋಕಿಕೆರೆ ಅವರಿಗೆ ಬೆಂಬಲ ಸೂಚಿಸಿದರು.