ಬಿಜೆಪಿಗೆ ಸ್ಪಷ್ಟ ಬಹುಮತ ಬರಲಿದೆ; ಶೋಭಾ ಕರಂದ್ಲಾಜೆ

ದಾವಣಗೆರೆ.ಏ.೧: ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಬರುತ್ತದೆ ಎಂಬ ವಿಶ್ವಾಸವಿದೆ ಎಂದು ಕೇಂದ್ರ ಸಚಿವೆ ಶೋಭಾ  ಕರಂದ್ಲಾಜೆ ಹೇಳಿದರು.
ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾರ್ಯಕರ್ತರ ಅಭಿಪ್ರಾಯ ಕೇಳಿ ಟಿಕೆಟ್ ಹಂಚಿಕೆ ಮಾಡಬೇಕೆಂಬ ನಿರ್ಧಾರಕ್ಕೆ ಬರಲಾಗಿದೆ. ಬೂತ್ ಮೇಲ್ಪಟ್ಟ ಪದಾಧಿಕಾರಿಗಳು, ಕಾರ್ಯಕರ್ತರು ಅಭಿಪ್ರಾಯ ತಿಳಿಸಲು ಅವಕಾಶ ನೀಡಿದ್ದೇವೆ. ಜನಪರವಾದ ಕೆಲಸ ಮಾಡಿದವರಿಗೆ ಟಿಕೆಟ್ ಸಿಗುತ್ತೆ. ಕೇಂದ್ರದ ನಾಯಕರು ಇದಕ್ಕೆ ಸಮ್ಮತಿ ಕೊಡುತ್ತಾರೆ ಎಂಬ ವಿಶ್ವಾಸ ಇದೆ ಎಂದರು
ಪ್ರಧಾನಿ ಮೋದಿಯವರು ಪ್ರವಾಸ ಮಾಡಿದೆಲ್ಲೆಡೆ ಡಬಲ್ ಎಂಜಿನ್ ಸರ್ಕಾರದ ಸಾಧನೆ ಬಗ್ಗೆ ಮಾತನಾಡುತ್ತಾರೆ. ದೇಶದ ರಕ್ಷಣೆ, ವಿದೇಶಗಳಲ್ಲಿ ಗೌರವ ಸಿಗಲು ಎರಡೂ ಕಡೆ ಬಿಜೆಪಿ  ಸರ್ಕಾರ ಇರಬೇಕು. ಇಲ್ಲಿ ಮಾಡಿರುವ ಕೆಲಸಗಳೇ ನಮಗೆ ಶ್ರೀರಕ್ಷೆ ಎಂದು ತಿಳಿಸಿದರು.
ಪ್ರಜಾತಂತ್ರ, ಪ್ರಜಾಪ್ರಭುತ್ವದಡಿ ನಡೆಯುವ ಪಕ್ಷ ಅಂದರೆ ಬಿಜೆಪಿ . ಬೂತ್ ಪ್ರಮುಖರು, ಶಕ್ತಿ ಕೇಂದ್ರ, ಪೇಜ್ ಪ್ರಮುಖರು, ಜಿ. ಪಂ. ಮಟ್ಟ, ಜಿಲ್ಲೆಗಳ ಟೀಂಗಳನ್ನು ಕೇವಲ ಚುನಾವಣೆಗಾಗಿ ಮಾಡುವುದಿಲ್ಲ. ವರ್ಷಪೂರ್ತಿ ಕೆಲಸ ಮಾಡುತ್ತವೆ. ಸರ್ಕಾರ ಇದ್ದಾಗ ಸಾಧನೆಗಳನ್ನು ಜನರಿಗೆ ತಲುಪಿಸುವ ಪ್ರಾಮಾಣಿಕ ಪ್ರಯತ್ನ ಮಾಡಿಕೊಂಡು ಬಂದಿವೆ. ಅಧಿಕಾರ ಇಲ್ಲದ ಸಂದರ್ಭದಲ್ಲಿ ಜನರ ಧ್ವನಿಯಾಗಿ ಹೋರಾಟ ಮಾಡಿಕೊಂಡು ಬಂದಿದ್ದಾರೆ. ಪಕ್ಷಕ್ಕೆ ಕಾರ್ಯಕರ್ತರೇ ಶಕ್ತಿ ಎಂದರು.ಮೀಸಲಾತಿ ಸಂಬಂಧ ಕಳೆದ 30 ವರ್ಷದಿಂದ ಪರಿಶಿಷ್ಟ ಜಾತಿ, ಪಂಗಡದವರು ಹೋರಾಟ ಮಾಡಿಕೊಂಡು ಬಂದಿದ್ದಾರೆ. ಅಲ್ಪಸಂಖ್ಯಾತರ ಓಲೈಕೆಗಾಗಿ ಧರ್ಮದ ಆಧಾರದ ಮೇಲೆ ಮುಸ್ಲಿಂರಿಗೆ ಹೆಚ್ಚಿನ ಮೀಸಲಾತಿ ನೀಡಲಾಗಿದೆ. ಅದೇ ರೀತಿಯಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಹೆಚ್ಚಿಸಬೇಕೆಂಬ ಬೇಡಿಕೆ ಈಡೇರಿಸಲಾಗಿದೆ. ಸಂವಿಧಾನದ ಅಡಿಯಲ್ಲಿಯೇ ಮೀಸಲಾತಿ ನೀಡಲಾಗಿದೆ ಎಂದು ಒಳಮೀಸಲಾತಿಯನ್ನು ಸಮರ್ಥಿಸಿಕೊಂಡರು.ಲಂಬಾಣಿ, ಕೊರಚ, ಕೊರಮ, ಬೋವಿ ಸಮಾಜಕ್ಕೆ ಈ ಹಿಂದೆ ಸರಿಯಾಗಿ ಮೀಸಲಾತಿ ಸಿಗುತ್ತಿರಲಿಲ್ಲ. ಮೂರು ಜನ ಆಯ್ಕೆಯಾಗಿದ್ದರೆ ಒಬ್ಬರಿಗೆ ಮಾತ್ರ ಸಿಗುತಿತ್ತು. ಒಳಮೀಸಲಾತಿ ತಂದು ಶೇಕಡಾ 4.5ರಷ್ಟು ನೀಡಲಾಗಿದೆ. ಕಾಂಗ್ರೆಸ್  ಸಮಾಜದಲ್ಲಿ ತಪ್ಪು ಸಂದೇಶ ಕೊಡುತ್ತದೆ. ಮೀಸಲಾತಿ ಕಿತ್ತುಕೊಂಡಿದ್ದಾರೆ ಎಂಬ ಆರೋಪ ಸುಳ್ಳು ಮಾಡುತ್ತಿದೆ. ಈ ಹಿಂದೆ ಲಂಬಾಣಿ, ಬೋವಿ ಜನಾಂಗಕ್ಕೆ ಶೇಕಡಾ 1 ರಷ್ಟು ಮೀಸಲಾತಿ ಸಿಗುತ್ತಿರಲಿಲ್ಲ. ಎಷ್ಟು ಜನರಿಗೆ ಉದ್ಯೋಗ ಸಿಕ್ಕಿದೆ, ವಿದ್ಯಾಭ್ಯಾಸದಲ್ಲಿ ಸಹಾಯ ಆಗಿದೆಯಾ.ಧ್ವನಿ ಇಲ್ಲದ ಸಮುದಾಯಕ್ಕೆ ಧ್ವನಿ ಕೊಡುವ ಕೆಲಸ ನಮ್ಮ ಸರ್ಕಾರ ಮಾಡಿದೆ. ಈ ಹಿಂದೆ ಅಧಿಕಾರ ನಡೆಸಿದವರು ಯಾಕೆ ಧೈರ್ಯ ತೋರಲಿಲ್ಲ ಎಂದರು.ಈ ವೇಳೆ
ಸಂಸದ ಜಿ. ಎಂ. ಸಿದ್ದೇಶ್ವರ, ಶಾಸಕರಾದ ಎಸ್. ಎ. ರವೀಂದ್ರನಾಥ್, ಎಸ್. ವಿ. ರಾಮಚಂದ್ರಪ್ಪ,ವೀರೇಶ್ ಹನಗವಾಡಿ ಇದ್ದರು.