ಬಿಜೆಪಿಯಲ್ಲಿ ಉತ್ರಮ ಕೆಲಸ ಮಾಡುವವರೇ ನಾಯಕರು‌

ದಾವಣಗೆರೆ.ಜ.೨೨: ದಾವಣಗೆರೆ ರಾಜಕಾರಣದ ಶಕ್ತಿ ಕೇಂದ್ರ. ಫೆಬ್ರವರಿ ಕೊನೆ ವಾರ ಇಲ್ಲವೇ ಮಾರ್ಚ್ ಮೊದಲ ವಾರದಲ್ಲಿ ಬಿಜೆಪಿ ಐತಿಹಾಸಿಕ ಸಮಾವೇಶ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಈ ಬೃಹತ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ಜಿಎಂಐಟಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ದಾವಣಗೆರೆಯಲ್ಲಿ ನಡೆಯುವ ಸಮಾವೇಶ ಇತಿಹಾಸ ಸೃಷ್ಟಿಸಲಿದೆ ಎಂದು ತಿಳಿಸಿದರು.ಆಡಳಿತದಲ್ಲಿರುವ ರಾಜ್ಯಗಳಲ್ಲಿ ಕಾಂಗ್ರೆಸ್ ಯಾವ ಕೊಡುಗೆ ನೀಡಿಲ್ಲ. ರಾಜಸ್ತಾನ, ಛತ್ತೀಸ್ ಗಡದಲ್ಲಿ ಜನಪರ ಆಡಳಿತ ನೀಡಿಲ್ಲ. ಭರವಸೆಗಳು ಏನಾದವು. ಯಾವ ಭರವಸೆಯನ್ನೂ ಈಡೇರಿಸಿಲ್ಲ.‌ಇನ್ನು ರಾಜಕೀಯದಲ್ಲಿ ಪ್ರಬುದ್ಧರಾಗಿರದ ನಾಯಕರ ನೇತೃತ್ವದಲ್ಲಿ ಕಾಂಗ್ರೆಸ್ ಮುನ್ನಡೆಯುತ್ತಿದೆ. ಪ್ರಜಾಧ್ವನಿ ಯಾತ್ರೆ ಸುಳ್ಳಿನಿಂದ ಕೂಡಿದೆ. ಚುನಾವಣೆ ಹತ್ತಿರವಾಗುತ್ತಿದ್ದಂತೆ ಸುಳ್ಳಿನ ಭರವಸೆ ನೀಡುತ್ತಿರುವ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ತುರ್ತು ಪರಿಸ್ಥಿತಿ ಹೇರಿತ್ತು. ಕುಟುಂಬ ರಾಜಕಾರಣಕ್ಕೆ ಮನ್ನಣೆ ಕೊಟ್ಟಿತ್ತು ಎಂದು ವಾಗ್ದಾಳಿ ನಡೆಸಿದರು. ಭಾರತೀಯ ಜನತಾ ಪಕ್ಷದ ವಿಜಯ ಸಂಕಲ್ಪ ಅಭಿಯಾನಕ್ಕೆ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ನಿಟುವಳ್ಳಿಯ ಶ್ರೀ ದುರ್ಗಾಂಬಿಕಾ ದೇವಸ್ಥಾನದ ಆವರಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಚಾಲನೆ ನೀಡಿದರು‌. ಈ ವೇಳೆ ಮಾತನಾಡಿದ ಅವರು, ಕಾಂಗ್ರೆಸ್ ಪ್ರಜಾ ಧ್ವನಿ ಹುಡುಕಿಕೊಂಡು ಹೊರಟಿದೆ.  ಎಲ್ಲಿಯೂ ಅಸ್ತಿತ್ವ ಇಲ್ಲ. 200 ಯೂನಿಟ್ ಉಚಿತ ವಿದ್ಯುತ್ ನೀಡುತ್ತೇವೆ ಎಂದು ಈಗ ಹೇಳುತ್ತಿರುವ ಕಾಂಗ್ರೆಸ್ ನಾಯಕರು, 2013ರಿಂದ 18ರವರೆಗೆ ಅಧಿಕಾರದಲ್ಲಿ ಇದ್ದಾಗ ಯಾಕೆ ಕೊಡಲಿಲ್ಲ. ಜಮ್ಮು ಕಾಶ್ಮೀರ,‌ ಮಧ್ಯಪ್ರದೇಶ, ಬಿಹಾರ ರಾಜ್ಯಗಳು ಮೂರು ಕತ್ತಲಿನಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಾಗ ಕಳೆದದ್ದು ಮರೆತಿದ್ದಾರೆ ಎಂದರು.ಕಾಂಗ್ರೆಸ್ ಈ ದೇಶದಲ್ಲಿ ಅಧಿಕಾರದಲ್ಲಿ ಇದ್ದಾಗ ದುಡ್ಡು ಕೊಟ್ಟರೂ ಕರೆಂಟ್ ಸಿಗ್ತಿರಲಿಲ್ಲ. ಜನರಿಗೆ ಟೋಪಿ ಹಾಕುತ್ತಾ ಮೋಸ ಮಾಡುತ್ತಲೇ ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಭ್ರಷ್ಟಾಚಾರ ಮುಕ್ತ ಭಾರತ ಕಟ್ಟಲು ಮೋದಿ ಶ್ರಮಿಸುತ್ತಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಭಾಷಣ ಮನೆ ಮನೆಗೆ ತಲುಪಿಸದ ಕಾಂಗ್ರೆಸ್ಸಿಗರು ರಾಹುಲ್ ಗಾಂಧಿ  ಭಾಷಣ ತಲುಪಿಸಲು ಮುಂದಾಗಿದ್ದಾರೆ ಎಂದು ಹೇಳಿದರು.ಬಿಜೆಪಿಯಲ್ಲಿ ಉತ್ರಮ ಕೆಲಸ ಮಾಡುವವರೇ ನಾಯಕರು‌.‌ ಕಳೆದ ಬಾರಿ ಸ್ಪಷ್ಟ ಬಹುಮತ ಬಂದಿಲ್ಲ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಬರಬೇಕಾದರೆ ನೀವೆಲ್ಲರೂ ಶ್ರಮವಹಿಸಿ ಕೆಲಸ ಮಾಡಬೇಕು. ಆಗ ಮಾತ್ರ ಇದು ಸಾಧ್ಯವಾಗುತ್ತದೆ ಎಂದು ಕರೆ‌ ನೀಡಿದರು.