ಬಿಜೆಪಿಯಿಂದ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ

ಸಂಜೆವಾಣಿ ನ್ಯೂಸ್
ಮೈಸೂರು.ಏ.15:- ಅಂಬೇಡ್ಕರ್ ರವರ 133 ನೇ ಜಯಂತಿಯ ಪ್ರಯುಕ್ತ ಅಶೋಕಪುರಂ ಭಾಗದ ಉದ್ಯಾನವನದಲ್ಲಿ ಹಾಗೂ ಮೈಸೂರಿನ ಟೌನ್ ಹಾಲ್ ನಲ್ಲಿ ಅಂಬೇಡ್ಕರ್ ಪ್ರತಿಮೆಗೆ ಮಾಲಾಪಣೆ ಮಾಡಲಾಯಿತು.
ಇದೇ ಸಂದರ್ಭದಲ್ಲಿ ಅರಮನೆಯ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ನಮ್ಮ ಕಾರ್ಯಕರ್ತನಾದ ಪುನೀತ್ ಕುಮಾರ್ ರವರು ರಂಗೋಲಿಯಲ್ಲಿ ಬಿಡಿಸಿದ್ದ ಬೃಹತ್ ಅಂಬೇಡ್ಕರ್ ಅವರ ಭಾವಚಿತ್ರವನ್ನು ಲೋಕಾರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಎನ್.ಡಿ.ಎ ಅಭ್ಯರ್ಥಿಯಾದ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್, ಮಾಜಿ ಸಚಿವ ಎಸ್.ಎ.ರಾಮದಾಸ್, ಮಾಜಿ ಶಾಸಕ ಹಾಗೂ ಬಿಜೆಪಿ ನಗರಾಧ್ಯಕ್ಷ ಎಲ್.ನಾಗೇಂದ್ರ, ಎಸ್ಸಿ ಹಾಗೂ ಎಸ್ಟಿ ಮೋರ್ಚಾ ನಗರಾಧ್ಯಕ್ಷ ಶೈಲೇಂದ್ರ ಇನ್ನಿತರರು ಉಪಸ್ಥಿತರಿದ್ದರು.