ಬಿಜೆಪಿಯಿಂದ ಕೋಮು ಸೌಹಾರ್ದತೆಗೆ ಧಕ್ಕೆ: ಮಧು 

ಉಡುಪಿ, ನ.೧೩- ರಾಜ್ಯದಲ್ಲಿ ಬಿಜೆಪಿ ಪಕ್ಷ ತಮ್ಮ ರಾಜಕೀಯ ಉದ್ದೇಶಕ್ಕಾಗಿ ಧರ್ಮಗಳ ಮಧ್ಯೆ ಧ್ವೇಷ ಹರಡಿ ಕೋಮು ಸೌಹಾರ್ದತೆ ಧಕ್ಕೆ ತರುವ ಕೆಲಸ ಮಾಡುತ್ತಿದೆ. ಕರಾವಳಿ ಸೇರಿದಂತೆ ರಾಜ್ಯದ ಜನತೆ ಬುದ್ದಿವಂತರಾಗಿ ಬಿಜೆಪಿಯ ರಾಜಕೀಯ ಕುತಂತ್ರವನ್ನು ಅರಿತುಕೊಂಡಿದ್ದಾರೆ ಎಂದು ಕೆಪಿಸಿಸಿ ಹಿಂದುಳಿದ ಘಟಕದ ನೂತನ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ಹೇಳಿದ್ದಾರೆ.

ಉಡುಪಿ ಬ್ರಹ್ಮಗಿರಿಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಶನಿವಾರ ನಡೆದ ಜಿಲ್ಲಾ ಕಾಂಗ್ರೆಸ್ ಸಭೆಯನ್ನುದ್ದೇಶಿಸಿ ಅವರು ಮಾತನಾಡುತಿದ್ದರು. ದೇಶದಲ್ಲಿ ಹಲವು ವರ್ಷಗಳ ಕಾಲ ಆಡಳಿತದ ಕಾಂಗ್ರೆಸ್ ಪಕ್ಷದ ತಮ್ಮ ಅವಧಿಯಲ್ಲಿ ಜಾರಿಗೆ ತಂದ ಎಲ್ಲ ಯೋಜನೆಗಳು ಹಿಂದುಳಿದ ವರ್ಗಗಳ ಅಭಿವೃದ್ಧಿ ಪೂರಕವಾಗಿದೆ.  ಆದುದರಿಂದ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹು ಮತ ಪಡೆದು ಮತ್ತೆ ಅಧಿಕಾರಕ್ಕೆ ಬರಲಿದೆ ಎಂದರು. ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮುಖಂಡರಾದ ರಾಜು ಪೂಜಾರಿ, ಶಿವಾಜಿ ಸುವರ್ಣ, ಗೀತಾ ವಾಗ್ಳೆ, ಇಸ್ಮಾಯಿಲ್ ಆತ್ರಾಡಿ, ಬಿ.ನರಸಿಂಹ ಮೂರ್ತಿ, ಬಿ. ಕುಶಲ್ ಶೆಟ್ಟಿ, ಭಾಸ್ಕರ್ ರಾವ್ ಕಿದಿಯೂರು, ಅಣ್ಣಯ್ಯ ಸೇರಿಗಾರ್, ಕೀರ್ತಿ ಶೆಟ್ಟಿ, ಪ್ರಖ್ಯಾತ್ ಶೆಟ್ಟಿ, ಕಿಶನ್ ಹೆಗ್ಡೆ ಕೊಳ್ಕೆಬೈಲು, ಜಯ ಕುಮಾರ್, ಕಿಶೋರ್ ಕುಮಾರ್, ಶಂಕರ್ ಕುಂದರ್, ಉದ್ಯಾವರ ನಾಗೇಶ್ ಕುಮಾರ್, ಪ್ರಶಾಂತ್ ಜತ್ತನ್ನ, ಸುನೀಲ್ ಬಂಗೇರ, ಎಲ್ಲೂರು ಶಶಿಧರ್ ಶೆಟ್ಟಿ ಹರೀಶ್ ಶೆಟ್ಟಿ ಪಾಂಗಾಳ ಮೊದಲಾದವರು ಉಪಸ್ಥಿತರಿದ್ದರು.