ಬಿಜೆಪಿಯಿಂದ ರೈತರ ಬೆನ್ನಿಗೆ ಚೂರಿ: ಎಚ್ ಡಿಕೆ ಆಕ್ರೋಶ

ಬೆಂಗಳೂರು, ಏ 11- ಬಿಜೆಪಿ ಸರ್ಕಾರ ರೈತರ ಬಗ್ಗೆ ಮೃದು ಮಾತಾಡುತ್ತಲೇ ರೈತರ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡುತ್ತಿದೆ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು,
ಅಧಿಕಾರಕ್ಕೆ ಬಂದ ಕೆಲವೇ ಗಂಟೆಗಳಲ್ಲಿ ರೈತರ ಮೇಲೆ ಗೋಲಿಬಾರ್ ನಡೆಸಿದ್ದ ಬಿಜೆಪಿ ಸರಕಾರ, ರೈತರ ಬಗ್ಗೆ ಮೃದು ಮಾತಾಡುತ್ತಲೇ ರೈತರ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡುತ್ತಿದೆ. ಇದೀಗ ರಸಗೊಬ್ಬರ ದರವನ್ನು ಶೇಕಡ 60ರಷ್ಟು ಹೆಚ್ಚಳ ಮಾಡಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ರಸಗೊಬ್ಬರ ಕಂಪನಿಗಳ ಜತೆ ಕೇಂದ್ರ ಸಚಿವರು ಸಭೆ ನಡೆಸಿದರೆ ಯಾವುದೇ ಪ್ರಯೋಜನವಿಲ್ಲ. ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಬಾರದು ಎಂದು ಲೇವಡಿ ಮಾಡಿದ್ದಾರೆ.
ಬಾಯಿ ಮಾತಿನಿಂದ ರೈತರ ಬಾಳು ಹಸನಾಗಲು ಸಾಧ್ಯವಿಲ್ಲ. ರೈತರ ಮತಗಳ ಮೇಲೆ ಕಣ್ಣಿಟ್ಟು ಎಷ್ಟು ದಿನ ಸುಳ್ಳಿನ ಅರಮನೆ ಕಟ್ಟುತ್ತೀರಿ ಎಂದು ಪ್ರಶ್ನಸಿದ ಅವರು, ಇನ್ನಾದರೂ ರೈತರಿಗೆ ಸಹನೀಯ ಬದುಕು ಕಟ್ಟಿಕೊಳ್ಳಲು ಅವಕಾಶ ಕೊಡಿ. ರಸಗೊಬ್ಬರದ ಮೇಲಿನ ದರ ಹೆಚ್ಚಳ ವಾಪಸ್ ಪಡೆಯಿರಿ ಎಂದು ಆಗ್ರಹಿಸಿದ್ದಾರೆ.