ಆನೇಕಲ್. ಏ. ೧೮- ಬಿಜೆಪಿ ಪಕ್ಷದ ಅಭ್ಯರ್ಥಿ ಹುಲ್ಲಳ್ಳಿ ಶ್ರೀನಿವಾಸ್ ರವರು ತಮ್ಮ ಕುಟುಂಬದ ಸದಸ್ಯರ ಜೊತೆಗೂಡಿ ಮತ್ತು ಕೆಲವು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರ ಜೊತೆಗೂಡಿ ಬಂದು ಚುನಾವಣಾ ಅದಿಕಾರಿಗೆ ನಾಮಪತ್ರ ಸಲ್ಲಿಸಿದ ದೃಶ್ಯಗಳು ಕಂಡು ಬಂತು.
ಇನ್ನು ಬಿಜೆಪಿ ಪಕ್ಷದ ಅಭ್ಯರ್ಥಿ ಹುಲ್ಲಳ್ಳಿ ಶ್ರೀನಿವಾಸ್ ರವರು ಮಾತನಾಡಿ ಆನೇಕಲ್ ಕ್ಷೇತ್ರದಲ್ಲಿ ಬಿಜೆಪಿ ಪರ್ವ ಪ್ರಾರಂಭವಾಗಿದ್ದು ಈ ಬಾರಿ ಆನೇಕಲ್ ಕ್ಷೇತ್ರದ ಜನತೆ ಬಿಜೆಪಿ ಪಕ್ಷವನ್ನು ಬೆಂಬಲಿಸುತ್ತಾರೆ ಎಂದು ಭರವಸೆ ವ್ಯಕ್ತ ಪಡಿಸಿದರು. ಇನ್ನು ಪ್ರಚಾರದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.