
ಚಿಕ್ಕೋಡಿ, ಮಾ8: ಕೇಂದ್ರದಲ್ಲಿ ಮೋದಿಯವರ ಸಾಧನೆಯ ಹಾದಿಯಲ್ಲಿ ರಾಜ್ಯದ ಸಾಧನೆ ನೊಡಿದ ಜನತೆ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ತರಲು ಜನತೆ ಸಂಕಲ್ಪ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಚಿಕ್ಕೋಡಿ ಜಿಲ್ಲೆಯ ಅಂಕಲಿಯಲ್ಲಿ ನಡೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತಮಾಡಿ, ಕೋಟ್ಯಾಂತರ ರೂಪಾಯಿ ಅನುದಾನ ನೀಡುವ ಮೂಲಕ ಚಿಕ್ಕೋಡಿ ಸದಲಗಾ ಕ್ಷೆತ್ರದ ಅನೇಕ ರಸ್ತೆಗಳನ್ನು ಅಭಿವೃದ್ಧಿ ಪಡಿಸುವ ಮೂಲಕ ಅತಿವೃಷ್ಟಿಯಲ್ಲಿ ಮನೆ ಕಳೆದುಕೊಂಡ ಸಾವಿರಾರು ಪಲಾನುಭವಿಗಳಿಗೆ 5ಲಕ್ಷ ಮನೆ ಕಟ್ಟಲು ನೀಡಲಾಗಿದೆ ಎಂದರು.
ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಸಿ ಟಿ ರವಿ ರಾಜ್ಯ ಉಪಾಧ್ಯಕ್ಷ ಲಕ್ಷ್ಮಣ ಸವದಿ ಸಚಿವೆ ಶಶಿಕಲಾ ಜೊಲ್ಲೆ ಉಸ್ತುವಾರಿ ಸಚಿವ ಗೋವಿಂದ್ ಕಾರಜೋಳ್ ಸಂಸದ ಅಣ್ಣ ಸಾಹೇಬ್ ಜೊಲ್ಲೆ ವಿಧಾನ ಪರಿಷತ್ ಸದಸ್ಯ ಎನ್ ರವಿಕುಮಾರ್ ರಾಜ್ಯ ವಕ್ತಾ ಎಂ ಬಿ ಜಿರಲಿ, ಜಿಲ್ಲಾಧ್ಯಕ್ಷ ಡಾ. ರಾಜೇಶ್ ನೆರ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕೌವಟಗಿಮಠ ಮಾಜಿ ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ ಮಾಜಿ ಸಚಿವ ಶಶಿಕಾಂತ್ ನಾಯಕ್ ರಾಜ್ಯ ಕಾರ್ಯದರ್ಶಿ ಉಜ್ವಾಲಾ ಬಡವನಾಚೆ ವಿಜಯ ಸಂಕಲ್ಪ ಯಾತ್ರೆಯ ಮಾಧ್ಯಮ ಸಂಚಾಲಕ ಎಫ್ ಎಸ್ ಸಿದ್ದನಗೌಡರ ಇದ್ದರು.